ADVERTISEMENT

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

​ಪ್ರಜಾವಾಣಿ ವಾರ್ತೆ
Published 29 ಜೂನ್ 2025, 8:13 IST
Last Updated 29 ಜೂನ್ 2025, 8:13 IST
<div class="paragraphs"><p> ಲೇಖಕಿ ಬಾನು ಮುಷ್ತಾಕ್‌</p></div>

ಲೇಖಕಿ ಬಾನು ಮುಷ್ತಾಕ್‌

   

ಬಳ್ಳಾರಿ: ಡಿಸೆಂಬರ್‌ ತಿಂಗಳಲ್ಲಿ ಬಳ್ಳಾರಿಯಲ್ಲಿ ಜರುಗಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಕ್ ಅವರ ಹೆಸರನ್ನು ಘೋಷಿಸಲಾಗಿದೆ.

ಬಳ್ಳಾರಿಯಲ್ಲಿನ ಖಾಸಗಿ ಹೋಟೆಲ್ ನಲ್ಲಿ ಭಾನುವಾರ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಕಸಾಪದ ರಾಜ್ಯಾಧ್ಯಕ್ಷರಾದ ಮಹೇಶ್ ಜೋಷಿ ಅವರು ಮಾತನಾಡಿ ಬಳ್ಳಾರಿಯಲ್ಲಿ ಜರುಗಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಕ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದರು.

ADVERTISEMENT

ದೀಪ ಬಾಸ್ತಿ ಅವರನ್ನು ಸಮ್ಮೇಳನದಲ್ಲಿ ಗೌರವಿಸಲಾಗುತ್ತದೆ ಎಂದರು.

ಜೂ.29ರಂದು ಬಳ್ಳಾರಿಯ ಖಾಸಗಿ ಹೋಟೆಲ್ ನಲ್ಲಿ ನಡೆದ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸರ್ವಾನುಮತದಿಂದ ಬಾನು ಮುಸ್ತಾಕ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.