ADVERTISEMENT

ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ₹10 ಕೋಟಿ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2020, 13:03 IST
Last Updated 3 ಫೆಬ್ರುವರಿ 2020, 13:03 IST
   

ಕಲಬುರ್ಗಿ: ‘ನಗರದಲ್ಲಿ ಇದೇ 5ರಿಂದ ನಡೆಯಲಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ರಾಜ್ಯ ಸರ್ಕಾರ ₹10 ಕೋಟಿ ಬಿಡುಗಡೆ ಮಾಡಿದೆ‌’ ಎಂದು ಸಮ್ಮೇಳನದ ಕೋಶಾಧ್ಯಕ್ಷರೂ ಆದ ಜಿಲ್ಲಾಧಿಕಾರಿ ಶರತ್ ಬಿ. ಹೇಳಿದರು.

‘ಎರಡು ದಿನಗಳಲ್ಲಿ ಸಮ್ಮೇಳನದ ಖಾತೆಗೆ ಹಣ ಜಮಾ ಆಗಲಿದೆ. ಜನರಿಂದಲೂ ದೇಣಿಗೆ ಹರಿದು ಬರುತ್ತಿದೆ. ಸಮ್ಮೇಳನ ಯಶಸ್ವಿಯಾಗಿ ನಡೆಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ’ ಎಂದು ಅವರು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ನಿತ್ಯವೂ ನನ್ನನ್ನು ಸಂಪರ್ಕಿಸಿ ಸಮ್ಮೇಳನದ ಸಿದ್ಧತೆಯ ಮಾಹಿತಿ ಪಡೆಯುತ್ತಿದ್ದಾರೆ. ವಿವಿಧ ಸಮಿತಿಗಳ
ಅಧ್ಯಕ್ಷರಾಗಿರುವ ಶಾಸಕರಿಗೂ ಮಾರ್ಗದರ್ಶನ ಮಾಡುತ್ತಿದ್ದಾರೆ’ ಎಂದು ತಿಳಿಸಿದರು.

ADVERTISEMENT

‘ಸಮ್ಮೇಳನಕ್ಕೆ ಮುಂಚೆ ಬಂದಲ್ಲಿ ಅಧಿಕಾರಿಗಳು ಬರೀ ಸಭೆಯಲ್ಲಿ ಭಾಗವಹಿಸಬೇಕಾಗುತ್ತದೆ. ಇದರಿಂದ ಸಿದ್ಧತೆಗೆ ಹೆಚ್ಚು ಸಮಯ ಸಿಗುವುದಿಲ್ಲ ಎಂಬ ಕಾರಣಕ್ಕೆ ಕಾರಜೋಳ ಅವರು ಬಂದಿಲ್ಲ’ ಎಂದರು.

₹ 10 ಕೋಟಿ: ಸಮ್ಮೇಳನಕ್ಕೆ ₹14 ಕೋಟಿ ಅನುದಾನ ನೀಡುವಂತೆಕನ್ನಡ ಸಾಹಿತ್ಯ ಪರಿಷತ್ತು ಸರ್ಕಾರಕ್ಕೆ ಕೋರಿತ್ತು. ಆದರೆ, ₹10 ಕೋಟಿ ಅನುದಾನ ನೀಡಿದೆ. ಕಳೆದ ವರ್ಷ ಧಾರವಾಡದಲ್ಲಿ ನಡೆದ ಸಾಹಿತ್ಯ ಸಮ್ಮೇಳನಕ್ಕೂ ₹10 ಕೋಟಿ ಅನುದಾನ ದೊರೆತಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.