ADVERTISEMENT

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ವಿಷಯ ಆಯ್ಕೆ ಸಮಿತಿ ರಚನೆ

​ಪ್ರಜಾವಾಣಿ ವಾರ್ತೆ
Published 9 ಜನವರಿ 2021, 18:55 IST
Last Updated 9 ಜನವರಿ 2021, 18:55 IST

ಬೆಂಗಳೂರು: ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಗೋಷ್ಠಿಗಳ ಸ್ವರೂಪ ಮತ್ತು ವಿಷಯ ಆಯ್ಕೆಗೆ ಕನ್ನಡ ಸಾಹಿತ್ಯ ಪರಿಷತ್ತು ಆರು ಮಂದಿ ಸದಸ್ಯರ ಸಮಿತಿ ರಚಿಸಿದೆ.

ಮುಂಬರುವ ಫೆ.26ರಿಂದ 28ರವರೆಗೆ ಸಮ್ಮೇಳನ ನಡೆಯಲಿದೆ. ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆಯಾಗಿದೆ. ಡಾ. ಪ್ರಧಾನ ಗುರುದತ್ತ, ಡಾ.ಬಿ.ವಿ. ವಸಂತ ಕುಮಾರ್, ಡಾ.ಕೆ.ವೈ. ನಾರಾಯಣಸ್ವಾಮಿ, ಡಾ. ಸರಜೂ ಕಾಟ್ಕರ್, ಸತೀಶ್ ಕುಲಕರ್ಣಿ ಮತ್ತು ಡಾ. ಜಯಶ್ರೀ ದಂಡೆ ಅವರು ಸಮಿತಿಯ ಸದಸ್ಯರಾಗಿದ್ದಾರೆ.

ರಾಜ್ಯದಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಬಂದು, ಸರ್ಕಾರ ಅವಕಾಶ ನೀಡಿದಲ್ಲಿ ಸಾಹಿತ್ಯ ಸಮ್ಮೇಳನ ನಡೆಸಲು ಪರಿಷತ್ತು ನಿರ್ಧರಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.