ADVERTISEMENT

85ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕಾಗಿ ₹14 ಕೋಟಿಗೆ ಬೇಡಿಕೆ: ಮನು ಬಳಿಗಾರ

​ಪ್ರಜಾವಾಣಿ ವಾರ್ತೆ
Published 13 ಜನವರಿ 2020, 20:17 IST
Last Updated 13 ಜನವರಿ 2020, 20:17 IST
ಸಾಹಿತ್ಯ ಸಮ್ಮೇಳನ
ಸಾಹಿತ್ಯ ಸಮ್ಮೇಳನ   

ಕಲಬುರ್ಗಿ: ಕಲಬುರ್ಗಿಯಲ್ಲಿ ಫೆಬ್ರುವರಿ 5ರಿಂದ 7ರವರೆಗೆ ನಡೆಯುವ 85ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕಾಗಿ ₹14 ಕೋಟಿ ಬಿಡುಗಡೆ ಮಾಡುವಂತೆ ಕನ್ನಡ ಸಾಹಿತ್ಯ ಪರಿಷತ್ತು ಸರ್ಕಾರಕ್ಕೆ ಮನವಿ ಸಲ್ಲಿಸಿದೆ.

‘ಸಮ್ಮೇಳನದ ಕೋಶಾಧ್ಯಕ್ಷರೂ ಆದ ಕಲಬುರ್ಗಿ ಜಿಲ್ಲಾಧಿಕಾರಿ ಶರತ್‌ .ಬಿ ಅವರು ₹14 ಕೋಟಿ ಅಂದಾಜು ಮಾಡಿ ಪ್ರಸ್ತಾವ ಕಳಿಸಿದ್ದರು. ಅಷ್ಟೂ ಹಣ ಬಿಡುಗಡೆ ಮಾಡಲು ಕೋರಿ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ. ರವಿ ಅವರಿಗೆ ಪತ್ರ ಬರೆದಿದ್ದಾರೆ’ ಎಂದು ಪರಿಷತ್ತಿನ ಅಧ್ಯಕ್ಷ ಡಾ. ಮನು ಬಳಿಗಾರ ‘ಪ್ರಜಾವಾಣಿ’ಗೆ ತಿಳಿಸಿದರು.

‘ಧಾರವಾಡದಲ್ಲಿ ನಡೆದ ಸಮ್ಮೇಳನಕ್ಕೆ ಸರ್ಕಾರವು ₹11 ಕೋಟಿ ಬಿಡುಗಡೆ ಮಾಡಿತ್ತು. ಕಲಬುರ್ಗಿಯ ದಾನಿಗಳಿಂದ ಹಣ ಸಂಗ್ರಹಿಸುವ ಹಾಗೂ ಊಟದ ವ್ಯವಸ್ಥೆ ದಾನಿಗಳಿಗೆ ವಹಿಸಿ
ಕೊಡುವ ಚರ್ಚೆಯೂ ನಡೆದಿದೆ. ಸರ್ಕಾರ ತನ್ನ ಪಾಲಿನ ಹಣ ನೀಡಿದರೆ ಸಮ್ಮೇಳನದ ಸಿದ್ಧತೆ ವೇಗ ಪಡೆಯುವುದು’ ಎಂದರು.

ADVERTISEMENT

‘ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನು ಬದಲಿಸಿ ಎಂದು ನಾನು ಹೇಳಿರಲಿಲ್ಲ. ಕಸಾಪದ ಸಾರ್ವಭೌಮತ್ವಕ್ಕೆ ಚ್ಯುತಿ ತರುವ ಕೆಲಸ ನಾನೆಂದೂ ಮಾಡಿಲ್ಲ. ಈ ವಿವಾದ ಕಲಬುರ್ಗಿ ಸಮ್ಮೇಳನದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ’ ಎಂದು ಡಾ.ಮನು ಬಳಿಗಾರ ಸ್ಪಷ್ಟನೆ ನೀಡಿದರು

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.