ADVERTISEMENT

‘ಕನ್ನಡ ಬೋಧನೆ ಕಡ್ಡಾಯ: ವಿಟಿಯುಗೆ ಟಿ.ಎಸ್. ನಾಗಾಭರಣ ಸೂಚನೆ

​ಪ್ರಜಾವಾಣಿ ವಾರ್ತೆ
Published 15 ಜುಲೈ 2020, 20:31 IST
Last Updated 15 ಜುಲೈ 2020, 20:31 IST
ನಾಗಾಭರಣ
ನಾಗಾಭರಣ   

ಬೆಂಗಳೂರು: ‘ಈ ಬಾರಿಯ ಶೈಕ್ಷಣಿಕ ವರ್ಷದಿಂದ ಕಡ್ಡಾಯವಾಗಿ ಕನ್ನಡ ಪಠ್ಯಕ್ರಮವನ್ನು ಜಾರಿಗೊಳಿಸಿ, ವಿದ್ಯಾರ್ಥಿಗಳಿಗೆ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಿಚಾರಧಾರೆಗಳನ್ನು ತಿಳಿಸಿಕೊಡಬೇಕು’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಅವರುವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಡಾ. ಕರಿಸಿದ್ದಪ್ಪ ಅವರಿಗೆ ಸೂಚಿಸಿದರು.

ವಿಡಿಯೊ ಕಾನ್ಫರೆನ್ಸ್ ಮೂಲಕ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ‘ಕನ್ನಡದ ಬಗ್ಗೆಪ್ರೀತಿ, ಗೌರವವಿದ್ದರೆ ಸಾಲದು. ಯೋಜನೆಗಳನ್ನು ಕಾರ್ಯಗತಗೊಳಿಸಲು ಕಾರ್ಯೋನ್ಮುಖರಾಗಬೇಕು. ಆಗಸ್ಟ್ ಅಂತ್ಯದೊಳಗೆ ಕನ್ನಡದ ಪಠ್ಯಪುಸ್ತಕಗಳನ್ನು ಸಿದ್ಧಪಡಿಸಿ, ಅದನ್ನು ವೃತ್ತಿ ಶಿಕ್ಷಣ ಪದವಿ ವಿದ್ಯಾರ್ಥಿಗಳಿಗೆ ಬೋಧಿಸಬೇಕು. ಇಲ್ಲದಿದ್ದರೆ ಪ್ರಾಧಿಕಾರ ತನ್ನ ಮುಂದಿನ ಹಾದಿ ತುಳಿಯಬೇಕಾಗುತ್ತದೆ’ ಎಂದು ಎಚ್ಚರಿಸಿದರು.

‘ಕಳೆದ ಶೈಕ್ಷಣಿಕ ವರ್ಷದಲ್ಲಿಯೇ ಕನ್ನಡ ಪಠ್ಯಕ್ರಮವನ್ನು ಅಂಕಗಣನೆಯ ಆಧಾರದಲ್ಲಿ ಬೋಧಿಸುವ ಸಂಬಂಧ ಕ್ರಮಕೈಗೊಳ್ಳಬೇಕಿತ್ತು. ಎಲ್ಲ ವೃತ್ತಿ ಶಿಕ್ಷಣ ವಿಶ್ವವಿದ್ಯಾಲಯಗಳಲ್ಲಿ ಎರಡು ಸೆಮಿಸ್ಟರ್‌ಗಳಲ್ಲಿ ಕನ್ನಡ ಬೋಧನೆಯನ್ನು ಕಡ್ಡಾಯವಾಗಿ ಮಾಡಲೇಬೇಕು ಎಂದು ಸೂಚಿಸಲಾಗಿತ್ತು.ಆದರೆ, ಇದುವರೆಗೂ ಆ ಸಂಬಂಧ ಯಾವುದೇ ಕ್ರಮ ನಡೆದಿಲ್ಲ. ವಿಶ್ವವಿದ್ಯಾಲಯದ ಜಾಲತಾಣದಲ್ಲಿಯೂ ಇಂಗ್ಲಿಷ್‌ ಭಾಷೆಯನ್ನು ಯಥೇಚ್ಛವಾಗಿ ಬಳಸಲಾಗಿದೆ‘ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.