
ಬೆಂಗಳೂರು: ಸಾಹಿತಿ ಜಯದೇವಿ ತಾಯಿ ಲಿಗಾಡೆ ಮತ್ತು ಕನ್ನಡ ಪರ ಹೋರಾಟಗಾರ ಪ್ರಭುರಾವ್ ಕಂಬಳಿವಾಲೆ ಅವರ ಹೆಸರಿನಲ್ಲಿ ಟ್ರಸ್ಟ್ ರಚಿಸಲು ನಿರ್ಧರಿಸಲಾಗಿದ್ದು, ಈ ಸಂಬಂಧ ಶೀಘ್ರವೇ ಆದೇಶ ಹೊರಡಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.
ಕಲ್ಯಾಣ ಕರ್ನಾಟಕದ ಭಾಗದ ಜನತೆಯ ಬಹುದಿನದ ಅಪೇಕ್ಷೆಯಂತೆ ಈ ಎರಡು ಟ್ರಸ್ಟ್‌ಗಳನ್ನು ರಚಿಸುವ ಪ್ರಸ್ತಾವಕ್ಕೆ ಈಗಾಗಲೇ ಅನುಮೋದನೆ ನೀಡಲಾಗಿದೆ. ಇವರು ಕನ್ನಡ ಭಾಷೆ ಮತ್ತು ಸಾಂಸ್ಕೃತಿಕ ಜಗತ್ತಿಗೆ ನೀಡಿದ ಕೊಡುಗೆ ಅನನ್ಯವಾದುದು. ಹೀಗಾಗಿ ಈ ಟ್ರಸ್ಟ್‌ಗಳನ್ನು ಅವರ ಆಶಯಗಳಿಗೆ ಅನುಗುಣವಾಗಿ ರಚಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟ್ರಸ್ಟ್‌ಗಳಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ಬೀದರ್ ಜಿಲ್ಲೆಯ ಉಸ್ತುವಾರಿ ಸಚಿವರ ಜತೆ ಚರ್ಚಿಸಿ ನೇಮಕ ಮಾಡಲಾಗುವುದು ಎಂದು ತಂಗಡಗಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.