ಕೆ. ಶಿವಲಿಂಗಪ್ಪ ಹಂದಿಹಾಳು
ಚಿತ್ರಕೃಪೆ: ಫೇಸ್‌ಬುಕ್
ನವದೆಹಲಿ: ಕೇಂದ್ರ ಸಾಹಿತ್ಯ ಅಕಾಡೆಮಿ ಕೊಡಮಾಡುವ 2025ನೇ ಸಾಲಿನ ‘ಬಾಲ ಸಾಹಿತ್ಯ ಪುರಸ್ಕಾರ’ ಕೆ. ಶಿವಲಿಂಗಪ್ಪ ಹಂದಿಹಾಳು ಅವರ ‘ನೋಟ್‌ಬುಕ್’ ಸಣ್ಣ ಕಥೆಗಳ ಸಂಕಲನಕ್ಕೆ ಲಭಿಸಿದೆ.
ಪ್ರಶಸ್ತಿ ಪುರಸ್ಕೃತರು ತಲಾ ₹50 ಸಾವಿರ ನಗದು ಹಾಗೂ ಫಲಕಗಳನ್ನು ಪಡೆಯಲಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಅಕಾಡೆಮಿ ತಿಳಿಸಿದೆ.
‘ಬಾಲ ಸಾಹಿತ್ಯ ಪುರಸ್ಕಾರ’ಕ್ಕೆ ಕನ್ನಡದ ಲೇಖಕರಾದ ಡಾ. ಬಸು ಬೇವಿನಗಿಡದ, ಡಾ. ಬೇಲೂರು ರಘುನಂದನ್ ಹಾಗೂ ಹೆಚ್. ಶಶಿಕಲಾ ಅವರು ತೀರ್ಪುಗಾರರಾಗಿದ್ದರು.
‘ನೋಟ್‌ಬುಕ್’ ಮಕ್ಕಳ ಸಣ್ಣ ಕಥೆಗಳ ಪುಸ್ತಕವು 2021ರಲ್ಲಿ ಪ್ರಕಟವಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.