ADVERTISEMENT

ಪಶ್ಚಿಮ ಏಷ್ಯಾ ರಾಷ್ಟ್ರಗಳಲ್ಲಿ ಇರುವ ಕನ್ನಡಿಗರು ಸುರಕ್ಷಿತ: ಸಿಎಂ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2026, 15:46 IST
Last Updated 1 ಮಾರ್ಚ್ 2026, 15:46 IST
<div class="paragraphs"><p>ಸಿದ್ದರಾಮಯ್ಯ</p></div>

ಸಿದ್ದರಾಮಯ್ಯ

   

ಬೆಂಗಳೂರು: ‘ಪಶ್ಚಿಮ ಏಷ್ಯಾ ರಾಷ್ಟ್ರಗಳಲ್ಲಿ ಇರುವ ಕನ್ನಡಿಗರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆದಿರುವುದು ತುಸು ಸಮಾಧಾನಕರ ವಿಚಾರ. ಯಾರೊಬ್ಬರೂ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಪ್ರತಿಯೊಬ್ಬರನ್ನೂ ಸುರಕ್ಷಿತವಾಗಿ ಕರೆತರಲು ನಿರಂತರವಾಗಿ ಸರ್ಕಾರ ಪ್ರಯತ್ನಿಸಲಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಭರವಸೆ ನೀಡಿದರು.

ದುಬೈನಲ್ಲಿ ಸಿಲುಕಿರುವ ಕನ್ನಡಿಗರ ಜೊತೆ ವಿಡಿಯೊ ಕರೆ ಮಾಡಿ ಮಾತನಾಡಿ, ಧೈರ್ಯ ತುಂಬಿದ್ದಾರೆ.

ADVERTISEMENT

‘ಯಾವುದೇ ಚಿಂತೆ ಮಾಡಬೇಡಿ. ನಿಮ್ಮನ್ನು ಸ್ವದೇಶಕ್ಕೆ ಮರಳಿ ತರಲು ಎಲ್ಲ ರೀತಿಯ ವ್ಯವಸ್ಥೆ ಮಾಡಲಾಗುವುದು. ಈ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಾಗಿದೆ’ ಎಂದು ಅವರು ಹೇಳಿದರು. 

‘ಇಸ್ರೇಲ್ - ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿಯಿಂದಾಗಿ ದುಬೈ ಸೇರಿದಂತೆ ಯುದ್ಧಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ಸದ್ಯದ ಪರಿಸ್ಥಿತಿಯ ಕುರಿತು ಮಾಹಿತಿ ಪಡೆದು, ಅವರನ್ನು ತವರಿಗೆ ವಾಪಸ್ ಕರೆ ತರುವ ಕುರಿತು ವಿದೇಶಾಂಗ ಇಲಾಖೆ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿರುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದೇನೆ’ ಎಂದೂ ಅವರು ತಿಳಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.