ADVERTISEMENT

ಕಾಂತಾವರ ಕನ್ನಡ ಸಂಘ: ದತ್ತಿ ಪ್ರಶಸ್ತಿ ಘೋಷಣೆ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2024, 23:30 IST
Last Updated 8 ಅಕ್ಟೋಬರ್ 2024, 23:30 IST
<div class="paragraphs"><p>ತುಕಾರಾಮ ಪೂಜಾರಿ</p></div>

ತುಕಾರಾಮ ಪೂಜಾರಿ

   

ಮಂಗಳೂರು: ಕಾಂತಾವರ ಕನ್ನಡ ಸಂಘದ 2024ನೇ ಸಾಲಿನ ನಾಲ್ಕು ದತ್ತಿನಿಧಿ ಪ್ರಶಸ್ತಿಗಳನ್ನು ಘೋಷಿಸಲಾಗಿದೆ.

ಸರಸ್ವತಿ ಬಲ್ಲಾಳ್ ಮತ್ತು ಡಾ.ಸಿ.ಕೆ.ಬಲ್ಲಾಳ್ ದಂಪತಿ ಪ್ರತಿಷ್ಠಾನದಿಂದ ನೀಡುವ ‘ಕರ್ನಾಟಕ ಏಕೀಕರಣದ ನೇತಾರ ಕೆ.ಬಿ.ಜಿನರಾಜ ಹೆಗ್ಡೆ ಸ್ಮಾರಕ ಸಾಂಸ್ಕೃತಿಕ ಪ್ರಶಸ್ತಿ’ಯನ್ನು ಬಂಟ್ವಾಳದ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಮತ್ತು ತುಳು ಬದುಕು ವಸ್ತು ಸಂಗ್ರಹಾಲಯದ ಸ್ಥಾಪಕರಾದ ಇತಿಹಾಸ ಪ್ರಾಧ್ಯಾಪಕ ತುಕಾರಾಮ ಪೂಜಾರಿ ಅವರಿಗೆ, ಹಿರಿಯ ಭಾಷಾತಜ್ಞ ಯು.ಪಿ.ಉಪಾಧ್ಯಾಯ ಅವರ ಹೆಸರಿನ ‘ಮಹೋಪಾಧ್ಯಾಯ ಪ್ರಶಸ್ತಿ’ಯನ್ನು ಕರಾವಳಿ ಭಾಗದ ಕನ್ನಡ ಸಾಹಿತ್ಯ ವಲಯದ ಪ್ರಮುಖ ಸಂಪನ್ಮೂಲ ವ್ಯಕ್ತಿ ಆಗಿರುವ ಪ್ರೊ. ವರದರಾಜ ಚಂದ್ರಗಿರಿ ಅವರಿಗೆ ನೀಡಲಾಗುವುದು.

ADVERTISEMENT

ಧಾರವಾಡದ ಹಿರಿಯ ಸಾಹಿತಿ ಜಿ.ಎಂ. ಹೆಗಡೆ ಅವರ ದತ್ತಿನಿಧಿಯ ‘ಪ್ರಾಧ್ಯಾಪಕ ಸಂಶೋಧಕ ಪ್ರಶಸ್ತಿ’ಯನ್ನು ಕಾಸರಗೋಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಧ್ಯಾಪಕಿ ಯು.ಮಹೇಶ್ವರಿ ಅವರಿಗೆ ಮತ್ತು ಹಿರಿಯ ರಂಗಕರ್ಮಿ ಶ್ರೀಪತಿ ಮಂಜನಬೈಲ್ ಅವರು ಸ್ಥಾಪಿಸಿದ ದತ್ತಿನಿಧಿಯಿಂದ ಕೊಡಲಾಗುವ ‘ಮಂಜನಬೈಲ್ ರಂಗಸನ್ಮಾನ್’ ಪ್ರಶಸ್ತಿಯನ್ನು ಕಲಾವಿದ, ನಟ, ನಿರ್ದೇಶಕರಾಗಿ ರಂಗಭೂಮಿಯಲ್ಲಿ ಸಕ್ರಿಯರಾಗಿರುವ ಬೆಳಗಾವಿಯ ಅರವಿಂದ ಕುಲಕರ್ಣಿ ಅವರಿಗೆ ನೀಡಲಾಗುವುದು.

ಕಾಂತಾವರ ಕನ್ನಡ ಸಂಘದ ಅಧ್ಯಕ್ಷ ನಾ.ಮೊಗಸಾಲೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ತಲಾ ₹10 ಸಾವಿರ ಗೌರವ ಸಂಭಾವನೆ, ತಾಮ್ರಪತ್ರ ಮತ್ತು ಸನ್ಮಾನ ಒಳಗೊಂಡಿದೆ. ನವೆಂಬರ್ 1ರಂದು ನಡೆಯುವ ‘ಕಾಂತಾವರ ಉತ್ಸವ’ದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಸದಾನಂದ ನಾರಾವಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.