ADVERTISEMENT

ಕಂದಾಯ ಇಲಾಖೆಗೆ ಕಪಿಲ್‌ ಮೋಹನ್‌

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2022, 19:14 IST
Last Updated 8 ಸೆಪ್ಟೆಂಬರ್ 2022, 19:14 IST

ಬೆಂಗಳೂರು: ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಕಪಿಲ್‌ ಮೋಹನ್‌ ಅವರನ್ನು ಕಂದಾಯ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ.

ಅಲ್ಲದೆ, ಅವರಿಗೆ ಕಂದಾಯ ಇಲಾಖೆಯ ವಿಪತ್ತು ನಿರ್ವಹಣೆ, ಭೂಮಿ ಘಟಕ ಮತ್ತು ಕಾರವಾರದಲ್ಲಿರುವ ಕರ್ನಾಟಕ ಸಮುದ್ರಯಾನ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಯನ್ನೂ ಹೆಚ್ಚುವರಿಯಾಗಿ ನೀಡಲಾಗಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಎಂ.ಟಿ. ರೇಜು ಅವರನ್ನು ಆಹಾರ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಕೆಪಿಟಿಸಿಎಲ್‌ ವ್ಯವಸ್ಥಾಪಕ ನಿರ್ದೇಶಕಿ ಎನ್‌. ಮಂಜುಳಾ ಅವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.

ADVERTISEMENT

ಸ್ಥಳ ನಿರೀಕ್ಷಣೆಯಲ್ಲಿದ್ದ ಕೃಷ್ಣ ಬಾಜಪೇಯಿ ಅವರನ್ನು ಕಲಬುರಗಿ ಕಂದಾಯ ವಿಭಾಗದ ಪ್ರಾದೇಶಿಕ ಆಯುಕ್ತರಾಗಿ ನಿಯೋಜಿಸಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಕಾರ್ಯದರ್ಶಿ ಹುದ್ದೆಯನ್ನೂ ಅವರಿಗೆ ಹೆಚ್ಚುವರಿಯಾಗಿ ನೀಡಲಾಗಿದೆ. ಸ್ಥಳ ನಿರೀಕ್ಷಣೆಯಲ್ಲಿದ್ದ ಆನಂದ್‌ ಪ್ರಕಾಶ್ ಮೀನಾ ಅವರನ್ನು ಕೆಕೆಆರ್‌ಡಿಬಿ ಉಪ ಕಾರ್ಯದರ್ಶಿಯಾಗಿ ನಿಯೋಜಿಸಲಾಗಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕಿ ಕೆ.ಎನ್‌. ಅನುರಾಧಾ ಅವರಿಗೆ ಕರ್ನಾಟಕ ರೇಷ್ಮೆ ಮಾರುಕಟ್ಟೆ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕಿ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.