ಬೆಂಗಳೂರು: ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಮತ್ತು ಗೌರವ ಸಲ್ಲಿಸುವ ಉದ್ದೇಶದಿಂದ ನಿರ್ಮಿಸಲಾಗಿರುವ ಬೃಹತ್ ವೀರಗಲ್ಲನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಅನಾವರಣ ಮಾಡಿದರು.
ನಗರದ ಕೇಂದ್ರ ಭಾಗದಲ್ಲಿರುವ ‘ರಾಷ್ಟ್ರೀಯ ಸೈನಿಕ ಸ್ಮಾರಕ’ದಲ್ಲಿ ಏಕಶಿಲಾ ವೀರಗಲ್ಲನ್ನು ನಿರ್ಮಿಸಲಾಗಿದೆ. ‘ಕಾರ್ಗಿಲ್ ವಿಜಯ ದಿವಸ’ದ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಈ ವೀರಗಲ್ಲನ್ನು ಸಿದ್ದರಾಮಯ್ಯ ಅವರು ಅನಾವರಣ ಮಾಡಿದರು.
ಸೈನಿಕ ಮತ್ತು ಪುನರ್ವಸತಿ ಇಲಾಖೆ, ರಾಷ್ಟ್ರೀಯ ಸೈನಿಕ ಸ್ಮಾರಕ ನಿರ್ವಹಣಾ ಟ್ರಸ್ಟ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, ಸಿದ್ದರಾಮಯ್ಯ ಅವರು ನಿವೃತ್ತ ಸೈನಿಕರಿಗೆ ಅಭಿನಂದನೆ ಸಲ್ಲಿಸಿದರು. ವೀರಗಲ್ಲನ್ನು ರೂಪಿಸಿದ ಶಿಲ್ಪಿ ಅಶೋಕ್ ಗುಡಿಗಾರ್ ಅವರನ್ನು ಸನ್ಮಾನಿಸಿದರು.
ಗೃಹ ಸಚಿವ ಜಿ.ಪರಮೇಶ್ವರ, ವಸತಿ ಸಚಿವ ಬಿ.ಝೆಡ್. ಜಮೀರ್ ಅಹಮದ್ ಖಾನ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಎಂ.ಎಂ.ಸಲೀಂ ಅವರು ಭಾಗಿಯಾಗಿದ್ದರು.
75 ಅಡಿವೀರಗಲ್ಲಿನ ಎತ್ತರ 400 ಟನ್‌ವೀರಗಲ್ಲಿನ ತೂಕ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.