ADVERTISEMENT

Covid-19 Karnataka Update: ರಾಜ್ಯದಲ್ಲಿ 34,858 ಪ್ರಕರಣಗಳು ಸಕ್ರಿಯ

​ಪ್ರಜಾವಾಣಿ ವಾರ್ತೆ
Published 12 ಜುಲೈ 2021, 14:29 IST
Last Updated 12 ಜುಲೈ 2021, 14:29 IST
ಕೋವಿಡ್‌–19 ಲಸಿಕೆ ಹಾಕಲು ಸಿದ್ಧತೆ ಮಾಡಿಕೊಳ್ಳುತ್ತಿರುವ ಆರೋಗ್ಯ ಸಿಬ್ಬಂದಿ–ಸಾಂದರ್ಭಿಕ ಚಿತ್ರ
ಕೋವಿಡ್‌–19 ಲಸಿಕೆ ಹಾಕಲು ಸಿದ್ಧತೆ ಮಾಡಿಕೊಳ್ಳುತ್ತಿರುವ ಆರೋಗ್ಯ ಸಿಬ್ಬಂದಿ–ಸಾಂದರ್ಭಿಕ ಚಿತ್ರ   

ಬೆಂಗಳೂರು: ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್‌–19 ದೃಢಪಟ್ಟ 1,386 ಹೊಸ ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ ಕೊರೊನಾ ಸೋಂಕಿನ ಕಾರಣಗಳಿಂದಾಗಿ 61 ಮಂದಿ ಸಾವಿಗೀಡಾಗಿರುವುದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಿಂದ ತಿಳಿದು ಬಂದಿದೆ.

ಒಟ್ಟು 28,72,684 ಪ್ರಕರಣಗಳ ಪೈಕಿ 28,01,907 ಮಂದಿ ಗುಣಮುಖರಾಗಿದ್ದಾರೆ ಹಾಗೂ 35,896 ಮಂದಿ ಮೃತಪಟ್ಟಿದ್ದಾರೆ. ಪ್ರಸ್ತುತ 34,858 ಪ್ರಕರಣಗಳು ಸಕ್ರಿಯವಾಗಿವೆ.

24 ಗಂಟೆಗಳಲ್ಲಿ 3,204 ಮಂದಿ ಚೇತರಿಸಿಕೊಂಡಿದ್ದಾರೆ. ಖಚಿತ ಪ್ರಕರಣಗಳ ಪ್ರಮಾಣ ಶೇ.1.26 ರಷ್ಟು ಹಾಗೂ ಮೃತರ ಪ್ರಮಾಣ ಶೇ. 4.40ರಷ್ಟು ದಾಖಲಾಗಿದೆ.

ADVERTISEMENT

ಬೆಂಗಳೂರಿನಲ್ಲಿ 319 ಪ್ರಕರಣಗಳು, ಮೈಸೂರಿನಲ್ಲಿ 177 ಪ್ರಕರಣಗಳು, ದಕ್ಷಿಣ ಕನ್ನಡದಲ್ಲಿ 126, ಹಾಸನದಲ್ಲಿ 108 ಹಾಗೂ ಕೊಡಗಿನಲ್ಲಿ 73 ಹೊಸ ಪ್ರಕರಣಗಳು ವರದಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.