ADVERTISEMENT

ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ: ಮೇ 24ರಿಂದ ಆರಂಭ

​ಪ್ರಜಾವಾಣಿ ವಾರ್ತೆ
Published 29 ಜನವರಿ 2021, 18:35 IST
Last Updated 29 ಜನವರಿ 2021, 18:35 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ‘ಪ್ರಸಕ್ತ ಶೈಕ್ಷಣಿಕ ಸಾಲಿನ (2020–21) ದ್ವಿತೀಯ ಪಿಯುಸಿ ಪರೀಕ್ಷೆಗಳು ಮೇ 24ರಿಂದ ಜೂನ್ 10ರವರೆಗೆ ನಡೆಯಲಿವೆ’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ‘ನೀಟ್, ಜೆಇಇಗಳಂಥ ಮುಂದಿನ ತರಗತಿಗಳ ಪ್ರವೇಶದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷಾ ವೇಳಾಪಟ್ಟಿ ಸಿದ್ಧಪಡಿಸಲಾಗಿದೆ’ ಎಂದರು.

‘ಕೋವಿಡ್ ಪಿಡುಗಿನ ಕಾರಣ 2020-21ನೇ ವರ್ಷದ ದ್ವಿತೀಯ ಪಿಯು ತರಗತಿಗಳು ಇದೇ ಜ. 1ರಿಂದ ಆರಂಭವಾಗಿವೆ. ಹೀಗಾಗಿ, ಪರೀಕ್ಷೆಗೆ ಅಗತ್ಯವಾಗಿರುವ ಪಠ್ಯಗಳನ್ನು ಉಳಿಸಿಕೊಂಡು, ಲಭ್ಯವಿರುವ ಶಾಲಾ ಶೈಕ್ಷಣಿಕ ವರ್ಷದ ಅವಧಿ ಪರಿಗಣಿಸಿ ಪರೀಕ್ಷೆಯ ದಿನಾಂಕ ನಿಗದಿಪಡಿಸಲಾಗಿದೆ’ ಎಂದು ಅವರು ವಿವರಿಸಿದರು.

ADVERTISEMENT

ಜುಲೈ 1ರಿಂದ ಶೈಕ್ಷಣಿಕ ವರ್ಷ: ಈ ವರ್ಷದ ಎಲ್ಲ ಪರೀಕ್ಷೆಗಳು ಮುಗಿದು, ಜೂನ್ ಅಂತ್ಯಕ್ಕೆ ಫಲಿತಾಂಶ
ಘೋಷಣೆ ಆಗಲಿದೆ. 2021-22ನೇ ಶೈಕ್ಷಣಿಕ ವರ್ಷ ಜುಲೈ 1ರಿಂದ ಆರಂಭವಾಗಲಿದೆ’ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.