ADVERTISEMENT

ಅ.12ಕ್ಕೆ ಆದಿಜಾಂಬವ ನಿಗಮ ಅಸ್ತಿತ್ವಕ್ಕೆ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2018, 19:51 IST
Last Updated 29 ಸೆಪ್ಟೆಂಬರ್ 2018, 19:51 IST

ಬೆಂಗಳೂರು: ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಲೋಕಾರ್ಪಣೆ ಅಕ್ಟೋಬರ್‌ 12ರಂದು ನಡೆಯಲಿದೆ. ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಅಕ್ಟೋಬರ್‌ 4ರಂದು ಬೆಳಿಗ್ಗೆ 11ಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ರಾಜ್ಯ ಮಾದಿಗ ಸಮುದಾಯದ ಮುಖಂಡರ ಸಭೆ ಕರೆಯಲಾಗಿದೆ ಎಂದು ಕಾಂಗ್ರೆಸ್‌ ಮುಖಂಡ ಎಚ್‌.ಆಂಜನೇಯ ತಿಳಿಸಿದರು.

ಶನಿವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಂಸದ ಕೆ.ಎಚ್.ಮುನಿಯಪ್ಪ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ’ ಎಂದರು.

‘ಮಾದಿಗ ಸಮುದಾಯವು ಅತ್ಯಂತ ಹಿಂದುಳಿದ ಅಸ್ಪೃಶ್ಯ ಜನಾಂಗ. ಈ ಸಮುದಾಯವು ಪರಿಶಿಷ್ಟ ಜಾತಿಯ ಜನಸಂಖ್ಯೆಯಲ್ಲಿ ಶೇ 6 ರಷ್ಟು ಇದ್ದರೂ, ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ, ಉದ್ಯೋಗ, ಶೈಕ್ಷಣಿಕ ಸೌಲಭ್ಯ ಹಾಗೂ ಆರ್ಥಿಕ ಸವಲತ್ತು ಸಿಕ್ಕಿಲ್ಲ. ಶೇ 1ರಷ್ಟು ಮಾತ್ರ ಸೌಲಭ್ಯ ಸಿಕ್ಕಿದೆ. ಸಮುದಾಯಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಬೇಕೆಂದು ಬಹು ವರ್ಷಗಳಿಂದ ಒತ್ತಾಯ ಮಾಡಿದ್ದೆವು’ ಎಂದರು.

ADVERTISEMENT

ರಾಜ್ಯಸಭಾ ಸದಸ್ಯ ಎಲ್‌.ಹನುಮಂತಯ್ಯ, ಎಂ.ಆರ್.ವೆಂಕಟೇಶ್, ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗದ ಮಾಜಿ ಅಧ್ಯಕ್ಷ ಎ.ಮುನಿಯಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.