ವಿಧಾನಸೌಧ
ಪ್ರಜಾವಾಣಿ ಚಿತ್ರ
ಬೆಂಗಳೂರು: ಸರ್ಕಾರಿ ಹುದ್ದೆಗಳಿಗೆ ನೇರ ನೇಮಕಾತಿಗೆ ಅಭ್ಯರ್ಥಿಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಯ ಕ್ರಮವಾಗಿ ಐದು ವರ್ಷ ಸಡಿಲಿಸಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.
2017ರ ಡಿ. 31ರವರೆಗೆ ಹೊರಡಿಸುವ ಎಲ್ಲ ಅಧಿಸೂಚನೆಗಳಲ್ಲಿ ಅರ್ಜಿ ಸಲ್ಲಿಸುವ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೆ ಆಯಾ ನೇಮಕಾತಿಯ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಈ ಸಡಿಲಿಕೆ ಸೌಲಭ್ಯ ಸಿಗಲಿದೆ.
2025ರ ಸೆ. 29ರಂದು ಹೊರಡಿಸಿದ್ದ ಆದೇಶದಲ್ಲಿ ಗ್ರೂಪ್ ‘ಬಿ’ ಮತ್ತು ಗ್ರೂಪ್ ‘ಸಿ’ ವೃಂದದ ಹುದ್ದೆಗಳ ನೇರ ನೇಮಕಾತಿಗಳಿಗೆ 2027ರ ಡಿ. 31ರವರೆಗೆ ಅರ್ಜಿ ಆಹ್ವಾನಿಸಿ ಹೊರಡಿಸುವ ಎಲ್ಲ ನೇರ ನೇಮಕಾತಿ ಅಧಿಸೂಚನೆಗಳಿಗೆ ಅಭ್ಯರ್ಥಿಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಮೂರು ವರ್ಷ ಸಡಿಲಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಉದ್ಯೋಗ ಆಕಾಂಕ್ಷಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಮನವಿ ಸಲ್ಲಿಸಿ ಐದು ವರ್ಷಗಳ ಸಡಿಲಿಕೆ ನೀಡುವಂತೆ ಕೋರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.