
ಬೆಳಗಾವಿ ಸುವರ್ಣ ಸೌಧ
ಸುವರ್ಣ ಸೌಧ (ಬೆಳಗಾವಿ): ವಾಹನ ನೋಂದಣಿ ಸಮಯದಲ್ಲಿ ಬೇರೆ ಬೇರೆ ವರ್ಗದ ಮೋಟಾರು ವಾಹನಗಳಿಗೆ ಪ್ರತ್ಯೇಕ ಉಪಕರ ವಿಧಿಸಲು ಅವಕಾಶ ಕಲ್ಪಿಸುವ ‘ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ (ತಿದ್ದುಪಡಿ) ಮಸೂದೆ’ ಸೇರಿ ನಾಲ್ಕು ತಿದ್ದುಪಡಿ ಮಸೂದೆಗಳನ್ನು ವಿಧಾನಸಭೆಯಲ್ಲಿ ಮಂಗಳವಾರ ಮಂಡಿಸಲಾಯಿತು.
ಸಾರಿಗೆ ಸಚಿವರ ಪರವಾಗಿ ಕಾನೂನು ಸಚಿವ ಎಚ್.ಕೆ. ಪಾಟೀಲ ಅವರು ‘ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ (ತಿದ್ದುಪಡಿ) ಮಸೂದೆ’, ‘ಬಾಂಬೆ ಸಾರ್ವಜನಿಕ ನ್ಯಾಸ(ಕರ್ನಾಟಕ ತಿದ್ದುಪಡಿ) ಮಸೂದೆ-2025’, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪರವಾಗಿ ‘ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರ(ತಿದ್ದುಪಡಿ) ಮಸೂದೆ’ ಮತ್ತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, ‘ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ (ಎರಡನೇ ತಿದ್ದುಪಡಿ) ಮಸೂದೆಯನ್ನು ಮಂಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.