
ಸ್ವಾತಂತ್ರ್ಯ ಉದ್ಯಾನ
ಬೆಂಗಳೂರು: ರಾಜ್ಯದಲ್ಲಿ ಮದ್ಯವನ್ನು ಅಕ್ರಮವಾಗಿ ಮಾರಾಟ ಮಾಡುವುದನ್ನು ಸಂಪೂರ್ಣವಾಗಿ ತಡೆಯಬೇಕು ಎಂದು ಒತ್ತಾಯಿಸಿ ‘ಮದ್ಯ ನಿಷೇಧ ಆಂದೋಲನ ಕರ್ನಾಟಕ’ವು ಇದೇ 25ರಿಂದ ಇಲ್ಲಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾವಧಿ ಸತ್ಯಾಗ್ರಹ ನಡೆಸಲಿದೆ.
‘ರಾಜ್ಯದ ಗ್ರಾಮೀಣ ಪ್ರದೇಶದ ಬೀಡಾ, ಕಿರಾಣಿ ಅಂಗಡಿಗಳಲ್ಲಿ ಮತ್ತು ಮನೆಗಳಲ್ಲೂ ಮದ್ಯವನ್ನು ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ. 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೂ ಮದ್ಯ ಮಾರಾಟ ಮಾಡುತ್ತಿರುವ ದೂರುಗಳಿವೆ. ಸರ್ಕಾರ ಈ ಬಗ್ಗೆ ತಕ್ಷಣವೇ ಗಮನಹರಿಸಬೇಕು. ಮದ್ಯ ಅಕ್ರಮ ಮಾರಾಟವನ್ನು ನಿಲ್ಲಿಸಬೇಕು’ ಎಂದು ಆಂದೋಲನವು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
‘ರಾಜ್ಯದಲ್ಲಿ ಈ ಹಿಂದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮದ್ಯದ ಅಂಗಡಿಗೆ ಪರವಾನಗಿ ನೀಡುವ ಮೊದಲು, ಅಲ್ಲಿನ ಶೇ 20ರಷ್ಟು ಮಹಿಳೆಯರ ಒಪ್ಪಿಗೆ ಬೇಕು ಎಂಬ ನಿಯಮ ಇತ್ತು. 2016ರಲ್ಲಿ ಅದನ್ನು ತೆಗೆದುಹಾಕಲಾಗಿದೆ. ಈಗ ಮತ್ತೆ ಆ ನಿಯಮವನ್ನು ಜಾರಿಗೆ ತರಬೇಕು. ಈ ಎರಡೂ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಲು ಸತ್ಯಾಗ್ರಹ ನಡೆಸಲಾಗುವುದು’ ಎಂದು ಪ್ರಕಟಣೆ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.