ADVERTISEMENT

ಉದ್ಯೋಗಸ್ಥ ಮಹಿಳೆಯರಿಗೆ ವರ್ಷಕ್ಕೆ 12 ಮುಟ್ಟಿನ ರಜೆ: ಕಾರ್ಮಿಕ ಇಲಾಖೆ ಆದೇಶ

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2025, 23:02 IST
Last Updated 12 ನವೆಂಬರ್ 2025, 23:02 IST
   

ಬೆಂಗಳೂರು: ಉದ್ಯೋಗಸ್ಥ ಮಹಿಳೆಯರಿಗೆ ತಿಂಗಳಿಗೆ ಒಂದರಂತೆ ವರ್ಷಕ್ಕೆ 12 ಮುಟ್ಟಿನ ರಜೆಯನ್ನು (ವೇತನ ಸಹಿತ) ನೀಡುವ ಕುರಿತು ಕಾರ್ಮಿಕ ಇಲಾಖೆ ಆದೇಶ ಹೊರಡಿಸಿದೆ.

ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, ತೋಟ ಕಾರ್ಮಿಕರ ಕಾಯ್ದೆ, ಬೀಡಿ ಮತ್ತು ಸಿಗಾರ್‌ ಕಾರ್ಮಿಕರ ಕಾಯ್ದೆ, ಮೋಟಾರು ಸಾರಿಗೆ ಕಾಯ್ದೆ ಅಡಿಯಲ್ಲಿ ನೋಂದಣಿ ಆಗಿರುವ ಕೈಗಾರಿಕೆಗಳು ಮತ್ತು ಸಂಸ್ಥೆಗಳೂ ಸೇರಿದಂತೆ ಎಲ್ಲ ವಲಯಗಳಲ್ಲಿ ಕೆಲಸ ಮಾಡುತ್ತಿರುವ 18ರಿಂದ 52ರ ವಯೋಮಾನದ ಎಲ್ಲ ಕಾಯಂ, ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರಿಗೆ ಈ ಸೌಲಭ್ಯ ನೀಡಬೇಕು ಎಂದು ಎಲ್ಲ ಉದ್ಯೋಗದಾತರಿಗೂ ಸೂಚಿಸಿದೆ.

ಷರತ್ತುಗಳು

ADVERTISEMENT
  • ಆಯಾ ತಿಂಗಳ ರಜೆಯನ್ನು ಆಯಾ ತಿಂಗಳಲ್ಲೇ ಬಳಸಿಕೊಳ್ಳಬೇಕು

  • ಒಂದು ತಿಂಗಳ ರಜೆಯನ್ನು ಮುಂದಿನ ತಿಂಗಳಿಗೆ ವಿಸ್ತರಿಸುವಂತಿಲ್ಲ

  • ಮುಟ್ಟಿನ ರಜೆ ಪಡೆಯಲು ವೈದ್ಯಕೀಯ ಪ್ರಮಾಣಪತ್ರ ನೀಡಬೇಕಿಲ್ಲ

  • 52 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಈ ರಜೆಯ ಸೌಲಭ್ಯ ಇಲ್ಲ

  • ಸರ್ಕಾರಿ, ಬಹುರಾಷ್ಟ್ರೀಯ, ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೂ ಅನ್ವಯ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.