ಬೆಂಗಳೂರು: ಮಂಗಳೂರು ಸಮೀಪದ ಪರಂಗೀಪೇಟೆಯಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿ ದಿಗಂತ್ ನಾಪತ್ತೆಯಾಗಿ 9 ದಿನ ಕಳೆದರೂ ಪತ್ತೆ ಮಾಡಲು ಸಾಧ್ಯವಾಗಿಲ್ಲ. ಆದಷ್ಟು ಬೇಗ ಹುಡುಕಿಸಿಕೊಡಬೇಕು ಎಂದು ಬಿಜೆಪಿಯ ವಿ.ಸುನಿಲ್‌ಕುಮಾರ್ ಆಗ್ರಹಿಸಿದರು.
ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಸುನಿಲ್ ಕುಮಾರ್, ಪರೀಕ್ಷೆಯ ಹಾಲ್‌ಟಿಕೆಟ್ ಪಡೆಯಲು ಹೋಗಿ ವಾಪಸ್ ಬರುವಾಗ ನಾಪತ್ತೆ ಆಗಿದ್ದಾನೆ. ಈ ವಿಚಾರ ಎಲ್ಲರಲ್ಲೂ ಆತಂಕ ಹುಟ್ಟಿಸಿದೆ. ಬೇಗನೆ ಪತ್ತೆ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆಯೂ ನಡೆದಿದೆ. ಇದೊಂದು ಅತ್ಯಂತ ಸೂಕ್ಷ ವಿಷಯ ಊಹಾಪೋಹಗಳಿಗೂ ಕಾರಣವಾಗಬಹುದು. ವಿಶೇಷ ತಂಡ ರಚನೆ ಮಾಡಿ ಪತ್ತೆ ಮಾಡಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಸಭಾಧ್ಯಕ್ಷ ಯು.ಟಿ.ಖಾದರ್ ಧ್ವನಿಗೂಡಿಸಿದರು.
ಗೃಹ ಸಚಿವರ ಪರವಾಗಿ ಉತ್ತರ ನೀಡಿದ ಶಿಕ್ಷಣ ಸಚಿವ ಮಧುಬಂಗಾರಪ್ಪ, ಈಗಾಗಲೇ 7 ತಂಡಗಳನ್ನು ರಚನೆ ಮಾಡಿ ಪತ್ತೆ ಕಾರ್ಯ ಆರಂಭಿಸಲಾಗಿದೆ. ಒಂದು ಸ್ಥಳದಲ್ಲಿ ವಿದ್ಯಾರ್ಥಿ ಮೊಬೈಲ್ ಫೋನ್ ಮತ್ತು ಚಪ್ಪಲಿ ಸಿಕ್ಕಿದೆ. ಡ್ರೋನ್ ಮೂಲಕವೂ ಹುಡುಕುವ ಪ್ರಯತ್ನ ನಡೆದಿದೆ. ಯಾವುದೇ ರೀತಿಯ ಸುಳಿವು ಸಿಕ್ಕಿಲ್ಲ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.