ADVERTISEMENT

ವಿಧಾನಸಭಾ ಕಲಾಪ ಸೋಮವಾರಕ್ಕೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 12 ಜುಲೈ 2019, 11:09 IST
Last Updated 12 ಜುಲೈ 2019, 11:09 IST
   

ಬೆಂಗಳೂರು: ಮುಂಗಾರ ಅಧಿವೇಶನದ ವಿಧಾನಸಭಾ ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಗಿದೆ.

ರಾಜ್ಯ ರಾಜಕಾರಣ ಮತ್ತೊಂದು ಮಹತ್ವದ ಘಟ್ಟಕ್ಕೆ ಬಂದಿದ್ದು ಶುಕ್ರವಾರದಂದು ಆರಂಭವಾದ ವಿಧಾನಸಭಾ ಕಲಾಪವನ್ನು ವಿಧಾನಸಭೆಯ ಸಭಾಧ್ಯಕ್ಷರು ಸೋಮವಾರಕ್ಕೆ ಮುಂದೂಡಿದರು.

ಇಂದು ಕಲಾಪ ಆರಂಭವಾಗುತ್ತಿದ್ದಂತೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು. ಇದೇ ವೇಳೆ ಮುಖ್ಯಮಂತ್ರಿ ಕುಮಾರಸ್ವಾಮಿವಿಶ್ವಾಸಮತ ಮಂಡಿಸಲು ನಿರ್ಧರಿಸಿರುವುದಾಗಿ ಅವರು ಹೇಳಿದರು.

ADVERTISEMENT

‘ಇಂದು ಅನಿವಾರ್ಯವಾಗಿ ನಾನು ಈ ಮಾತು ಹೇಳ್ತಿದ್ದೀನಿ. ಸದನದ ಬೆಂಬಲ ಇದ್ದರೆ ಮಾತ್ರ ನಾನು ಈ ಸ್ಥಾನದಲ್ಲಿ ಮುಂದುವರಿಯಲು ಸಾಧ್ಯ. ನಾನು ಸ್ವಪ್ರೇರಣೆಯಿಂದ ವಿಶ್ವಾಸಮತ ಮಂಡಿಸಲು ನಿರ್ಧರಿಸಿದ್ದೇನೆ. ನನಗೆ ಸಮಯ ಕೊಡಿ. ಅಂತ ಕೋರುತ್ತೇನೆ’ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿ ಹೇಳಿದರು.

ಮುಖ್ಯಮಂತ್ರಿ ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕ ಬಿ.ಎಸ್‌. ಯಡಿಯೂರಪ್ಪ, ಸಚಿವ ಡಿ.ಕೆ. ಶಿವಕುಮಾರ್‌ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿದರು. ಬಳಿಕ ಸದನದ ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.