ತೀರ್ಥಹಳ್ಳಿ: ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಅಭಿನಂದನೆ ಸಲ್ಲಿಸಲು ಸಮೀಪದ ಕುರುವಳ್ಳಿಯಲ್ಲಿ ವಿಶ್ವಕರ್ಮ ಸಮಾಜದಿಂದ ಮಂಗಳವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮವು ಮಾದರಿ ನೀತಿ ಸಂಹಿತೆ ಉಲ್ಲಂಘನೆ ಸಂಬಂಧ ಮೊಟಕುಗೊಂಡಿತು.
ಗ್ರಾಮದ ವಿಶ್ವಕರ್ಮ ಸಮುದಾಯ ಭವನದಲ್ಲಿ ಸಮಾರಂಭ ನಡೆಯುತ್ತಿದ್ದಾಗಲೇ ಬಂದ ಚುನಾವಣಾಧಿಕಾರಿಗಳು, ಅನುಮತಿ ಪಡೆಯದೇ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಸಭೆ ನಡೆಸಲಾಗುತ್ತಿದೆ ಎಂದು ದೂರಿದರು. ಅಲ್ಲದೇ, ಸಚಿವರಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮವು ಮತದಾರರ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ತಿಳಿಸಿದ್ದರಿಂದ ಸಮಾರಂಭ ಮೊಟಕುಗೊಂಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.