ADVERTISEMENT

ವಿಧಾನಸಭೆ ಚುನಾವಣೆ: ಬಿಜೆಪಿ ತೊರೆದು ಜೆಡಿಎಸ್‌ಗೆ ಸೇರ್ಪಡೆಯಾದ ಮಾಜಿ ಸಚಿವ ಎ.ಮಂಜು

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2023, 19:32 IST
Last Updated 11 ಮಾರ್ಚ್ 2023, 19:32 IST
ಹಾಸನದ ಮಾಜಿ ಸಚಿವ ಎ. ಮಂಜು ಬಿಡದಿಯಲ್ಲಿ ಶನಿವಾರ ಎಚ್‌.ಡಿ. ದೇವೇಗೌಡರ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆ ಆದರು. ಎಚ್‌.ಡಿ. ಕುಮಾರಸ್ವಾಮಿ, ಸಿ.ಎಂ. ಇಬ್ರಾಹಿಂ ಹಾಗೂ ನಿಖಿಲ್‌ ಕುಮಾರಸ್ವಾಮಿ ಇದ್ದರು
ಹಾಸನದ ಮಾಜಿ ಸಚಿವ ಎ. ಮಂಜು ಬಿಡದಿಯಲ್ಲಿ ಶನಿವಾರ ಎಚ್‌.ಡಿ. ದೇವೇಗೌಡರ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆ ಆದರು. ಎಚ್‌.ಡಿ. ಕುಮಾರಸ್ವಾಮಿ, ಸಿ.ಎಂ. ಇಬ್ರಾಹಿಂ ಹಾಗೂ ನಿಖಿಲ್‌ ಕುಮಾರಸ್ವಾಮಿ ಇದ್ದರು   

ಬಿಡದಿ (ರಾಮನಗರ): ಮಾಜಿ ಸಚಿವ ಎ. ಮಂಜು ಶನಿವಾರ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ತೊರೆದು ಎಚ್‌.ಡಿ. ದೇವೇಗೌಡರ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಯಾದರು.

ಬಿಡದಿಯಲ್ಲಿರುವ ಎಚ್‌.ಡಿ. ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರು ಮಂಜು ಅವರಿಗೆ ಪಕ್ಷದ ಶಾಲು ಹಾಕಿ ಬರಮಾಡಿಕೊಂಡರು. ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ
ಎಚ್‌.ಡಿ. ಕುಮಾರಸ್ವಾಮಿ, ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಮತ್ತಿತರರು ಈ ಸಂದರ್ಭ ಹಾಜರಿದ್ದರು.

ರಾಜಕೀಯ ಜೀವನದ ಆರಂಭದಿಂದಲೂ ಹಾಸನದಲ್ಲಿ ದೇವೇಗೌಡರ ಕುಟುಂಬವನ್ನು ವಿರೋಧಿಸುತ್ತಲೇ ಬಂದಿದ್ದ ಮಂಜು ಇದೀಗ ಜೆಡಿಎಸ್‌ ಸೇರ್ಪಡೆ ಆಗಿದ್ದಾರೆ. ಹಾಸನ ಜಿಲ್ಲೆಯಲ್ಲಿ ಸದ್ಯ ಜೆಡಿಎಸ್ ಪಂಚರತ್ನ ಯಾತ್ರೆ ನಡೆದಿದೆ. ಇದೇ 16ರಂದು ಅರಕಲಗೂಡಿನಲ್ಲಿ ಯಾತ್ರೆಗೆ ಸಿದ್ಧತೆ ನಡೆದಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.