ADVERTISEMENT

Video | ಅರಸೀಕೆರೆ: ‘ಕೈ’ ಹಿಡಿದ ಶಿವಲಿಂಗೇಗೌಡ ಅತಂತ್ರವಾಯ್ತಾ ಜೆಡಿಎಸ್‌?

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2023, 15:30 IST
Last Updated 11 ಏಪ್ರಿಲ್ 2023, 15:30 IST

ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನಲ್ಲಿ ಸತತವಾಗಿ ಮೂರು ಬಾರಿ ಶಾಸಕರಾಗಿ ಆಯ್ಕೆಯಾದವರು ಕೆ.ಎಂ.ಶಿವಲಿಂಗೇಗೌಡ ಅವರು ಮಾತ್ರ. 2004ರಲ್ಲಿ ಗಂಡಸಿ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶಿವಲಿಂಗೇಗೌಡ 18 ಮತಗಳ ಅಂತರದಿಂದ ಸೋತಿದ್ದರು. ಮೂರು ಬಾರಿಯೂ ಭಾರಿ ಮತಗಳ ಅಂತರದಿಂದಲೇ ಗೆಲುವು ಸಾಧಿಸಿದ್ದ ಅವರು ಸದ್ಯ ಕಾಂಗ್ರೆಸ್ ಸೇರಿದ್ದು ಹಸ್ತದ ಗುರುತಿನ ಮೇಲೆ ಚುನಾವಣೆ ಎದುರಿಸಲು ಸಜ್ಜಾಗಿದ್ದಾರೆ. ಹದಿನೈದು ವರ್ಷಗಳಿಂದ ಜೆಡಿಎಸ್‌ ಭದ್ರಕೋಟೆಯಾಗಿದ್ದ ಅರಸೀಕೆರೆ ಕಾಂಗ್ರೆಸ್‌ ಪಾಲಾಗುತ್ತಾ ಎಂಬ ಕುತೂಹಲವೂ ಮನೆ ಮಾಡಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT