ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಸಂತೋಷ್ ನಡುವಿನ ವೈಮನಸ್ಸನ್ನು ಪ್ರಸ್ತಾಪಿಸಿ ಕಾಂಗ್ರೆಸ್ ಸರಣಿ ಟ್ವೀಟ್ ಮಾಡಿದೆ.
‘ಅಧಿಕಾರದಲ್ಲಿ ಇದ್ದಾಗಲೆಲ್ಲ ಕಿರುಕುಳ ಕೊಟ್ಟು ಕೊನೆಗೆ ಅಧಿಕಾರದಿಂದ ಕೆಳಗಿಳಿಸಿದ 'ಸಂತೋಷ ಕೂಟ' ಈಗ ಮತ್ತೆ ಅಧಿಕಾರಕ್ಕೆ ಬರಲು ಯಡಿಯೂರಪ್ಪರನ್ನೇ ಮುಂದೆ ಬಿಟ್ಟು ಮರೆಯಲ್ಲಿ ಕುಳಿತಿರುವುದೇಕೆ? ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿರುವ ಆ ‘ಸಂತೋಷ’ಗೆ ಈಗ ಜನರ ಎದುರು ಬಂದು ಚುನಾವಣೆ ಎದುರಿಸುವ ಧೈರ್ಯ ಯಾಕಿಲ್ಲ’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
‘ಆಪರೇಷನ್ ಕಮಲ’ದ ಮೂಲಕ ಬಿಜೆಪಿಯನ್ನು ಅಧಿಕಾರಕ್ಕೆ ತಂದ ಯಡಿಯೂರಪ್ಪಗೆ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಅವಕಾಶ ನೀಡಲಿಲ್ಲ. ರಾಜ್ಯ ಪ್ರವಾಹಕ್ಕೆ ತುತ್ತಾಗಿ ಯಡಿಯೂರಪ್ಪ ಏಕಾಂಗಿಯಾಗಿ ರಾಜ್ಯ ಸುತ್ತಬೇಕಾಯ್ತು. ಹೈಕಮಾಂಡ್ ಮಟ್ಟದಲ್ಲಿ ಪ್ರಭಾವಿಯಾಗಿರುವ ‘ಸಂತೋಷ ಕೂಟ’ ಇದಕ್ಕೆ ಅಡ್ಡಿಯಾಗಿ ನಿಂತಿತ್ತು ಎಂದು ಕಾಂಗ್ರೆಸ್ ಕಿಡಿಕಾರಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.