ADVERTISEMENT

ಚುನಾವಣಾ ವೆಚ್ಚಕ್ಕೆ 210 ಕ್ವಿಂಟಲ್‌ ಕಡಲೆ ಉಡುಗೊರೆ

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2023, 1:32 IST
Last Updated 16 ಮಾರ್ಚ್ 2023, 1:32 IST
ಗಜೇಂದ್ರಗಡ ತಾಲ್ಲೂಕಿನ ಹಾಲಕೇರಿ ಗ್ರಾಮದ ಬಿಜೆಪಿ ಕಾರ್ಯಕರ್ತರು 210 ಕ್ವಿಂಟಲ್‌ ಕಡಲೆಯನ್ನು ಮೆರವಣಿಗೆ ಮೂಲಕ ವಿಜಯ ಸಂಕಲ್ಪ ಯಾತ್ರೆಯ ವೇದಿಕೆಯತ್ತ ತಂದರು
ಗಜೇಂದ್ರಗಡ ತಾಲ್ಲೂಕಿನ ಹಾಲಕೇರಿ ಗ್ರಾಮದ ಬಿಜೆಪಿ ಕಾರ್ಯಕರ್ತರು 210 ಕ್ವಿಂಟಲ್‌ ಕಡಲೆಯನ್ನು ಮೆರವಣಿಗೆ ಮೂಲಕ ವಿಜಯ ಸಂಕಲ್ಪ ಯಾತ್ರೆಯ ವೇದಿಕೆಯತ್ತ ತಂದರು   

ಗಜೇಂದ್ರಗಡ (ಗದಗ ಜಿಲ್ಲೆ): ರೋಣ ಮತಕ್ಷೇತ್ರದ ಶಾಸಕ ಕಳಕಪ್ಪ ಜಿ.ಬಂಡಿ ಅವರ ಚುನಾವಣಾ ವೆಚ್ಚಕ್ಕಾಗಿ ತಾಲ್ಲೂಕಿನ ಹಾಲಕೇರಿ ಗ್ರಾಮದ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು 210 ಕ್ವಿಂಟಲ್‌ ಕಡಲೆಯನ್ನು ಉಡುಗೊರೆಯಾಗಿ ನೀಡಿದ್ದಾರೆ.

ಹಾಲಕೇರಿ ಗ್ರಾಮದಿಂದ ಐದು ಟ್ರ್ಯಾಕ್ಟರ್‌ಗಳಲ್ಲಿ ತಂದ ಕಡಲೆಯನ್ನು ಪಟ್ಟಣದ ಬಸ್ ನಿಲ್ದಾಣದಿಂದ ಮೆರವಣಿಗೆ ಮೂಲಕ ನೂರಾರು ಕಾರ್ಯಕರ್ತರು ಬುಧವಾರ ಪಟ್ಟಣದಲ್ಲಿ ನಡೆದ ಬಿಜೆಪಿಯ ‘ವಿಜಯ ಸಂಕಲ್ಪ ಯಾತ್ರೆ’ ವೇದಿಕೆ
ಕಡೆಗೆ ತಂದರು.

ಮೆರವಣಿಗೆಗೆ ಡೊಳ್ಳು ಕುಣಿತ, ಸಂಗೀತ ವಾದ್ಯಗಳು ಮೆರುಗು ನೀಡಿದವು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.