ADVERTISEMENT

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಜೆಡಿಎಸ್‌ನ ಗುಬ್ಬಿ ಶ್ರೀನಿವಾಸ್‌

ಕಾಂಗ್ರೆಸ್‌ ಸೇರುವ ಸಂಭವ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 27 ಮಾರ್ಚ್ 2023, 4:45 IST
Last Updated 27 ಮಾರ್ಚ್ 2023, 4:45 IST
   

‌‌‌ಬೆಂಗಳೂರು: ಶಾಸಕ ಸ್ಥಾನಕ್ಕೆ ತುಮಕೂರು ಜಿಲ್ಲೆಯ ಗುಬ್ಬಿ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಶಾಸಕ ಎಸ್‌.ಆರ್‌ ಶ್ರೀನಿವಾಸ್‌ (ವಾಸು) ರಾಜೀನಾಮೆ ನೀಡಿದ್ದಾರೆ.

ಈ ಬಗ್ಗೆ ವಿಧಾನಸಭೆ ಸಬಾಧ್ಯಕ್ಷರಿಗೆ ಪತ್ರ ಬರೆದಿರುವ ಅವರು, ಸ್ವ ಇಚ್ಛೆಯಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ.

ಜೆಡಿಎಸ್‌ನಲ್ಲಿ ಅಸಮಾಧಾನಗೊಂಡಿರುವ ಅವರು, ಬಹಿರಂಗವಾಗಿಯೇ ಅಸಮಾಧಾನ ತೋಡಿಕೊಂಡಿದ್ದರು. ಪಕ್ಷ ತೊರೆಯುವ ಬಗ್ಗೆಯೂ ಹೇಳಿಕೊಂಡಿದ್ದರು.

ADVERTISEMENT

ಈಗ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್‌ ಸೇರುವ ಸಾಧ್ಯತೆ ಇದೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.