ADVERTISEMENT

ಕುತೂಹಲ ಮೂಡಿಸಿದ ರೇವಣ್ಣ– ಸ್ವರೂಪ್‌ ಭೇಟಿ

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2023, 19:31 IST
Last Updated 8 ಮಾರ್ಚ್ 2023, 19:31 IST
ಎಚ್‌.ಡಿ. ರೇವಣ್ಣ
ಎಚ್‌.ಡಿ. ರೇವಣ್ಣ    

ಹಾಸನ: ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್‌ ಆಕಾಂಕ್ಷಿ ಎಚ್‌.ಪಿ. ಸ್ವರೂಪ್‌ ಅವರು ನಗರದಲ್ಲಿರುವ ಸಂಸದರ ನಿವಾಸದಲ್ಲಿ ಶಾಸಕ ಎಚ್‌.ಡಿ. ರೇವಣ್ಣ ಅವರನ್ನು ಬುಧವಾರ ಭೇಟಿಯಾಗಿ ಅರ್ಧ ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದರು.

ಒಂದು ತಿಂಗಳಿಂದ ಹಾಸನ ಟಿಕೆಟ್ ಚರ್ಚೆ ನಡೆಯುತ್ತಿದ್ದು, ಭವಾನಿ ರೇವಣ್ಣ ಹಾಗೂ ಸ್ವರೂಪ್‌ ಮಧ್ಯೆ ಪೈಪೋಟಿ ಏರ್ಪಟ್ಟಿದೆ. ಟಿಕೆಟ್ ಗೊಂದಲದ ನಂತರ ಮೊದಲ ಬಾರಿಗೆ ಸ್ವರೂಪ್ ಹಾಗೂ ರೇವಣ್ಣ ಭೇಟಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಮಾರ್ಚ್‌ 10ರಿಂದ ಜಿಲ್ಲೆಯಲ್ಲಿ ಜೆಡಿಎಸ್ ಪಂಚರತ್ನ ರಥಯಾತ್ರೆ ನಡೆಯಲಿದೆ. ರಥಯಾತ್ರೆ ಯಶಸ್ಸಿಗಾಗಿ ಎಲ್ಲರನ್ನೂ ಒಗ್ಗೂಡಿಸಲು ರೇವಣ್ಣ ತಂತ್ರ ರೂಪಿಸಿದ್ದಾರೆ ಎನ್ನಲಾಗಿದೆ.

ADVERTISEMENT

ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸ್ವರೂಪ್, ‘ರೇವಣ್ಣ ಸಾಹೇಬರನ್ನು ಭೇಟಿಯಾಗಿ ಹತ್ತು ದಿನ ಆಗಿತ್ತು. ಸಾಹೇಬ್ರು ನಮ್ಮ ಪಕ್ಷದ ನಾಯಕರು. ಪಂಚರತ್ನ ಯಾತ್ರೆ ಬಗ್ಗೆ ಕುಳಿತು ಮಾತನಾಡೋಣ ಅಂತ ಹೇಳಿದ್ದಾರಷ್ಟೇ. ಟಿಕೆಟ್ ವಿಚಾರದ ಬಗ್ಗೆ ದೊಡ್ಡವರೆಲ್ಲ ಕುಳಿತುಕೊಂಡು ತೀರ್ಮಾನಿಸೋಣ ಎಂದಿದ್ದಾರೆ’ ಎಂದು ತಿಳಿಸಿದರು.

ಶಾಸಕ ಎಚ್‌.ಡಿ.ರೇವಣ್ಣ ಮಾತನಾಡಿ, ‘ಜೆಡಿಎಸ್‌ ಅಧಿಕಾರಾವಧಿಯಲ್ಲಿ ಆಗಿರುವ ಕಾಮಗಾರಿಗಳಿಗೆ ಮಾರ್ಚ್‌ 13ರಂದು ಶಂಕುಸ್ಥಾಪನೆ ನೆರವೇರಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಸನಕ್ಕೆ ಬರುತ್ತಿರುವುದು ಸರಿಯಲ್ಲ. ಅಗತ್ಯ ಬಿದ್ದರೆ ಅಂದು ಪ್ರತಿಭಟಿಸಲಾಗುವುದು’ ಎಂದು ಎಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.