ADVERTISEMENT

26ರಂದು ದೇವೇಗೌಡ ರೋಡ್‌ ಶೋ: ಎಚ್‌ಡಿಕೆ

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2023, 20:06 IST
Last Updated 5 ಮಾರ್ಚ್ 2023, 20:06 IST
ಎಚ್‌.ಡಿ.ದೇವೇಗೌಡ ಮತ್ತು ಎಚ್‌.ಡಿ. ಕುಮಾರಸ್ವಾಮಿ
ಎಚ್‌.ಡಿ.ದೇವೇಗೌಡ ಮತ್ತು ಎಚ್‌.ಡಿ. ಕುಮಾರಸ್ವಾಮಿ   

ಬೆಂಗಳೂರು: ಜೆಡಿಎಸ್‌ ಹಮ್ಮಿಕೊಂಡಿರುವ ಪಂಚರತ್ನ ರಥಯಾತ್ರೆಯ ಸಮಾರೋಪ ಮಾರ್ಚ್‌ 26ರಂದು ನಡೆಯಲಿದ್ದು, ಆ ದಿನ ಕುಂಬಳಗೋಡಿನಿಂದ ಆರಂಭವಾಗುವ ರೋಡ್‌ಶೋದಲ್ಲಿ ಪಕ್ಷದ ವರಿಷ್ಠ ಎಚ್‌.ಡಿ.ದೇವೇಗೌಡ ಅವರು ಭಾಗವಹಿಸಲಿದ್ದಾರೆ.

ನಾಗಮಂಗಲ ಕ್ಷೇತ್ರದ ಶಾಸಕ ಸುರೇಶ್‌ ಗೌಡ ಅವರು ನಗರದಲ್ಲಿ ಭಾನುವಾರ ನಗರದಲ್ಲಿ ಆಯೋಜಿಸಿದ್ದ ಕ್ಷೇತ್ರದ ನಿವಾಸಿಗಳ ಸಭೆಯಲ್ಲಿ ಮಾತನಾಡಿದ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಈ ವಿಷಯ ತಿಳಿಸಿದರು.

‘ಮಂಡ್ಯ ಮತ್ತು ಮೈಸೂರು ನಡುವಿನ ಸ್ಥಳವೊಂದರಲ್ಲಿ ಯಾತ್ರೆಯ ಸಮಾರೋಪ ನಡೆಯಲಿದೆ. ಸಮಾರೋಪದ ಸ್ಥಳದವರೆಗೂ ರೋಡ್‌ ಶೋ ನಡೆಸಲಿರುವ ದೇವೇಗೌಡರು, ಪಕ್ಷಕ್ಕೆ ಶಕ್ತಿ ತುಂಬಲಿದ್ದಾರೆ’ ಎಂದರು.

ADVERTISEMENT

ಮಂಡ್ಯ ಜಿಲ್ಲೆಯು ಜೆಡಿಎಸ್‌ನ ಭದ್ರ ನೆಲೆ. ಅದನ್ನು ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ. ಅಮಿತ್‌ ಶಾ ಅವರಿಗೆ ಮಂಡ್ಯದ ಬಗ್ಗೆ ಏನು ಗೊತ್ತು? ಸಚಿವ ಅಶ್ವತ್ಥ ನಾರಾಯಣ ಅವರು ಆ ಜಿಲ್ಲೆಯ ಬಗ್ಗೆ ಏನು ತಿಳಿದುಕೊಂಡಿದ್ದಾರೆ ಎಂದು ಪ್ರಶ್ನಿಸಿದರು.

ಸಚಿವರಿಗೆ ತಲುಪಬೇಕಿದ್ದ ಹಣ: ‘ಜೆಡಿಎಸ್‌ಗೆ ಅಧಿಕಾರ ನೀಡಿದರೆ ರಾಜ್ಯವು ದೇವೇಗೌಡರ ಕುಟುಂಬದ ಎಟಿಎಂ ಆಗುತ್ತದೆ ಎಂದು ಅಮಿತ್‌ ಶಾ ಹೇಳಿದ್ದರು. ಈಗ ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಮನೆಯಲ್ಲಿ ಕೋಟಿಗಟ್ಟಲೆ ಹಣ ಸಿಕ್ಕಿದೆ. ಅದರಲ್ಲಿ ಸ್ವಲ್ಪ ಹಣ ಬಿಜೆಪಿ ಸಚಿವರೊಬ್ಬರಿಗೆ ತಲುಪಬೇಕಿತ್ತು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.