ADVERTISEMENT

ಸಿ.ಎಂ‌ ಬೊಮ್ಮಾಯಿ ಭೇಟಿ‌ ಮಾಡಿದ ರಮೇಶ ಜಾರಕಿಹೊಳಿ: ರಾಜಕೀಯ ವಲಯದಲ್ಲಿ ಕುತೂಹಲ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2023, 7:48 IST
Last Updated 26 ಮಾರ್ಚ್ 2023, 7:48 IST
ಬಸವರಾಜ ಬೊಮ್ಮಾಯಿ ಮತ್ತು ರಮೇಶ ಜಾರಕಿಹೊಳಿ
ಬಸವರಾಜ ಬೊಮ್ಮಾಯಿ ಮತ್ತು ರಮೇಶ ಜಾರಕಿಹೊಳಿ    

ಹುಬ್ಬಳ್ಳಿ: ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರು ಭಾನುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಭೇಟಿ ನೀಡಿ ಚರ್ಚಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಬೆಳಿಗ್ಗೆ ನಿವಾಸಕ್ಕೆ ಭೇಟಿ ನೀಡಿದ ಅವರು, ಅಥಣಿ ಕ್ಷೇತ್ರದ ಟಿಕೆಟ್ ವಿಚಾರ ಕುರಿತು ಸುಮಾರು ಒಂದು ತಾಸು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕ್ಷೇತ್ರದ ಕೆಲ ವಿಷಯಗಳ ಕುರಿತು ಚರ್ಚೆ ನಡೆಸಲಾಗಿದೆ. ಅಥಣಿ ಟಿಕೆಟ್ ಕುರಿತು ಪಕ್ಷದ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.