ADVERTISEMENT

ವಿಧಾನಸಭೆ ಚುನಾವಣೆ: ರಾಜ್ಯಕ್ಕೆ ನಾಳೆ ಮುಖ್ಯ ಚುನಾವಣಾ ಆಯುಕ್ತರ ತಂಡ ಭೇಟಿ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2023, 19:45 IST
Last Updated 7 ಮಾರ್ಚ್ 2023, 19:45 IST
ರಾಜೀವ್‌ ಕುಮಾರ್‌
ರಾಜೀವ್‌ ಕುಮಾರ್‌   

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ನೇತೃತ್ವದ ತಂಡ ವಿಧಾನಸಭಾ ಚುನಾವಣೆ ಪೂರ್ವಸಿದ್ಧತೆ ವೀಕ್ಷಣೆಗಾಗಿ ಇದೇ 9ರಂದು ಬೆಂಗಳೂರಿಗೆ ಭೇಟಿ ನೀಡಲಿದೆ.

ನಿಯೋಗದಲ್ಲಿ ಚುನಾವಣಾ ಆಯುಕ್ತರಾದ ಅನೂಪ್ ಚಂದ್ರ ಪಾಂಡೆ, ಅರುಣ್ ಗೋಯಲ್‌ ಸೇರಿದಂತೆ ಹಲವು ಅಧಿಕಾರಿಗಳು ಇರುತ್ತಾರೆ. ಅಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಜತೆ ಸಭೆ ನಡೆಸು ವರು. ನಂತರ ಪ್ರತ್ಯೇಕವಾಗಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಮಾತು ಕತೆ ನಡೆಸಿ, ಸಲಹೆ, ಅಭಿಪ್ರಾಯ ಪಡೆಯುವರು.

ಅಂದು ಸಂಜೆ ಹೋಟೆಲ್‌ ತಾಜ್‌ ವೆಸ್ಟೆಂಡ್‌ನಲ್ಲಿ ಹಮ್ಮಿಕೊಂಡಿರುವ ‘ಪ್ರಜಾಪ್ರಭುತ್ವದ ಒಳಗೊಳ್ಳುವಿಕೆ ಮತ್ತು ಸಮಗ್ರತೆ’ ವಿಷಯ ಕುರಿತ ವಿಚಾರ ಸಂಕಿರಣದಲ್ಲಿ ಭಾಗವಹಿಸುವರು. ಹಲವು ಪ್ರಜಾಪ್ರಭುತ್ವ ದೇಶಗಳ ಚುನಾ ವಣಾ ಆಯುಕ್ತರು ನೇರವಾಗಿ ಹಾಗೂ ವಿಡಿಯೊ ಸಂವಾದದ ಮೂಲಕ ಭಾಗವಹಿಸುವರು.

ADVERTISEMENT

ಮಾ. 10 ರಂದು ರಾಜ್ಯದ ಜಿಲ್ಲಾ ಚುನಾವಣಾಧಿಕಾರಿಗಳ ಜತೆ ಪೂರ್ವಭಾವಿ ತಯಾರಿ ಕುರಿತು ಸಭೆ ನಡೆಸುವರು. ಅಂದು ಸಂಜೆ ನಗರದ ಐಐಎಸ್‍ಸಿ ಆವರಣದಲ್ಲಿರುವ ಟಾಟಾ ಸಭಾಂಗಣದಲ್ಲಿ ನಡೆಯುವ ಮತದಾರರ ಜಾಗೃತಿ ಕಾರ್ಯಕ್ರಮ, ವಿಶೇಷ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಚುನಾವಣಾ ರಾಯಭಾರಿಗಳು, ವಿದ್ಯಾರ್ಥಿಗಳು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿರುವರು. ಮಾ. 11ರಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.