ADVERTISEMENT

2023ರ ಚುನಾವಣೆ: ಮೀಸಲಾತಿಗೆ ದುಡಿಯುವವರನ್ನು ಬೆಂಬಲಿಸಿ -ಮೃತ್ಯುಂಜಯ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2022, 19:32 IST
Last Updated 20 ಮಾರ್ಚ್ 2022, 19:32 IST
ಬಸವಜಯ ಮೃತ್ಯುಂಜಯ ಸ್ವಾಮೀಜಿ
ಬಸವಜಯ ಮೃತ್ಯುಂಜಯ ಸ್ವಾಮೀಜಿ   

ಹುನಗುಂದ (ಬಾಗಲಕೋಟೆ): ‘ಹಿಂದುಳಿದ ಪಂಚಮಸಾಲಿ ಸಮಾಜದ ಮಕ್ಕಳ ಭವಿಷ್ಯಕ್ಕಾಗಿ ದುಡಿಯವವರೇ ಸಮಾಜದ ನಾಯಕರು. 2023ರ ವಿಧಾನಸಭೆ ಚುನಾವಣೆಯಲ್ಲಿ ಮೀಸಲಾತಿಗಾಗಿ ದುಡಿಯುವವರನ್ನು ಬೆಂಬಲಿಸಿ’ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠ, ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್‌, ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾ, ಹುನಗುಂದ-ಇಳಕಲ್ ತಾಲ್ಲೂಕು ಘಟಕಗಳ ಆಶ್ರಯದಲ್ಲಿ ಭಾನುವಾರ ತಾಲ್ಲೂಕಿನ ಹಿರೇಬಾದವಾಡಗಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ವೀರರಾಣಿ ಕಿತ್ತೂರ ಚನ್ನಮ್ಮನ ಪ್ರತಿಮೆ ಅನಾವರಣ ಮತ್ತು 2ಎ ಮೀಸಲಾತಿಗಾಗಿ ಪಂಚಮಸಾಲಿ ಪ್ರತಿಜ್ಞಾ ಪಂಚಾಯತ್‌ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

‘2022ನೇ ವರ್ಷ ಪಂಚಮಸಾಲಿ ಸಮಾಜಕ್ಕೆ ನಿರ್ಣಾಯಕ ವರ್ಷ. ಸಮಾಜಕ್ಕೆ 2ಎ ಮೀಸಲಾತಿ ಪಡೆದೇ ತೀರುತ್ತೇವೆ’ ಎಂದು ಸ್ವಾಮೀಜಿ ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.