ADVERTISEMENT

ಕೂಡ್ಲಿಗಿ ಬಿಜೆಪಿ ಶಾಸಕ ಗೋಪಾಲಕೃಷ್ಣ ರಾಜೀನಾಮೆ: ಶೀಘ್ರ ಕಾಂಗ್ರೆಸ್‌ ಸೇರ್ಪಡೆ?

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2023, 8:59 IST
Last Updated 31 ಮಾರ್ಚ್ 2023, 8:59 IST
ಸ್ಪೀಕರ್‌ ಕಾಗೇರಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸುತ್ತಿರುವ ಗೋಪಾಲಕೃಷ್ಣ
ಸ್ಪೀಕರ್‌ ಕಾಗೇರಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸುತ್ತಿರುವ ಗೋಪಾಲಕೃಷ್ಣ   

ಹೊಸಪೇಟೆ (ವಿಜಯನಗರ): ಜಿಲ್ಲೆಯ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎನ್‌.ವೈ.ಗೋಪಾಲಕೃಷ್ಣ ಅವರು ಅವರ ಶಾಸಕ ಸ್ಥಾನಕ್ಕೆ ಶುಕ್ರವಾರ ರಾಜೀನಾಮೆ ನೀಡಿದ್ದಾರೆ.

ಶಿರಸಿಯಲ್ಲಿ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಇಷ್ಟರಲ್ಲೇ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ಗೊತ್ತಾಗಿದೆ.

ಗೋಪಾಲಕೃಷ್ಣ ಅವರು ಬಿಜೆಪಿ ತೊರೆಯಲಿದ್ದಾರೆ ಎಂಬ ಮಾತುಗಳು ಕಳೆದ ಹಲವು ದಿನಗಳಿಂದ ಜಿಲ್ಲೆಯಲ್ಲಿ ಕೇಳಿ ಬರುತ್ತಿತ್ತು. ಈಗ ಅದು ನಿಜವಾಗಿದೆ. ಎರಡ್ಮೂರು ದಿನಗಳಲ್ಲಿ ಅವರು ಅಧಿಕೃತವಾಗಿ ಕಾಂಗ್ರೆಸ್‌ ಸೇರ್ಪಡೆಯಾಗಲಿದ್ದಾರೆ ಎಂದು ಅವರ ಆಪ್ತ ಮೂಲಗಳು ‘ಪ್ರಜಾವಾಣಿ’ಗೆ ಖಚಿತಪಡಿಸಿವೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಗೋಪಾಲಕೃಷ್ಣ ಅವರು ಕಣಕ್ಕಿಳಿಯಲಿದ್ದಾರೆ ಎಂದು ಗೊತ್ತಾಗಿದೆ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.