ADVERTISEMENT

ವಿಧಾನಸಭೆ ಚುನಾವಣೆಗೆ ಕಾರ್ಯತಂತ್ರ: ಹೈಕಮಾಂಡ್ ಸೂಚನೆಯಂತೆ ಕೈ ನಾಯಕರ ಸಭೆ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2022, 7:35 IST
Last Updated 16 ಆಗಸ್ಟ್ 2022, 7:35 IST
ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್
ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್   

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಕಾರ್ಯತಂತ್ರ ರೂಪಿಸುವ ಬಗ್ಗೆ ಪಕ್ಷದ ಚುನಾವಣಾ ತಂತ್ರಗಾರ ಸುನಿಲ್‌ ಕನುಗೊಳ್ ಜೊತೆ ರಾಜ್ಯ ಕಾಂಗ್ರೆಸ್‌ ನಾಯಕರು ಚರ್ಚೆ ನಡೆಸುತ್ತಿದ್ದಾರೆ. ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಈ ಸಭೆ ನಡೆಯುತ್ತಿದೆ.

ಎಐಸಿಸಿ ಸೂಚನೆಯಂತೆ ರಾಜ್ಯದಲ್ಲಿನ ಕಾಂಗ್ರೆಸ್‌ನ ಸ್ಥಿತಿಗತಿ ಬಗ್ಗೆ ಸುನಿಲ್‌ ಕನುಗೊಳ್ ತಂಡ ಇತ್ತೀಚೆಗೆ ಸಮೀಕ್ಷೆ ನಡೆಸಿತ್ತು. ಈಗಾಗಲೇ ಈ ಸಮೀಕ್ಷೆಯ ವರದಿಯನ್ನು ಎಐಸಿಸಿಗೆ ತಂಡ ಸಲ್ಲಿಸಿದೆ. ಈ ಸಮೀಕ್ಷೆಯಲ್ಲಿರುವ ಅಂಶಗಳನ್ನು ಮುಂದಿಟ್ಟುಕೊಂಡು ‘ಕೈ'ಮುಖಂಡರು ಚರ್ಚೆ ನಡೆಸುತ್ತಿದ್ದಾರೆ. ಚುನಾವಣಾ ಚಾಣಾಕ್ಷ ಎಂದೇ ಕರೆಸಿಕೊಂಡಿರುವ ಪ್ರಶಾಂತ್ ಕಿಶೋರ್ ಜೊತೆ ಸುನಿಲ್ ಕನುಗೊಳ್ ಕೆಲಸ ಮಾಡಿದ್ದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ, ಚುನಾವಣಾ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಜಿ. ಪರಮೇಶ್ವರ, ಶಾಸಕರಾದ ದಿನೇಶ್ ಗುಂಡೂರಾವ್, ಎಚ್.ಕೆ ಪಾಟೀಲ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ, ಸಲೀಂ ಅಹಮ್ಮದ್, ಆರ್‌. ಧ್ರುವ ನಾರಾಯಣ್ ಸಭೆಯಲ್ಲಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.