
ಪ್ರಜಾವಾಣಿ ವಾರ್ತೆಪ್ರಾತಿನಿಧಿಕ ಚಿತ್ರ
ಬೆಂಗಳೂರು: ವಿಧಾನ ಮಂಡಲದ ಜಂಟಿ ಅಧಿವೇಶನ ಇದೇ 22ರಿಂದ 31ರವರೆಗಿನ ಅವಧಿಯಲ್ಲಿ ರಜಾದಿನಗಳನ್ನು ಹೊರತುಪಡಿಸಿ ಒಟ್ಟು ಏಳು ದಿನ ನಡೆಯಲಿದೆ ಎಂದು ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ತಿಳಿಸಿದ್ದಾರೆ.
‘22ರಂದು ಬೆಳಿಗ್ಗೆ 11 ಗಂಟೆಗೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. 24, 25 ಮತ್ತು 26ರಂದು ಸಾರ್ವತ್ರಿಕ ರಜಾ ದಿನಗಳಿರುವುದರಿಂದ ಅಂದು ಕಾರ್ಯಕಲಾಪಗಳು ಇರುವುದಿಲ್ಲ’ ಎಂದು ಅವರು ಹೇಳಿದ್ದಾರೆ.
ಅಧಿವೇಶನದ ಅವಧಿಯಲ್ಲಿ ವಿಧಾನ ಸಭೆ ಮತ್ತು ವಿಧಾನ ಪರಿಷತ್‌ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ಮತ್ತು ಕೇಂದ್ರ ಸರ್ಕಾರ ನರೇಗಾ ಕಾಯ್ದೆಯ ಬದಲು ಹೊಸತಾಗಿ ಜಾರಿಗೆ ತಂದಿರುವ ‘ವಿಬಿ ಜಿ ರಾಮ್ ಜಿ’ ಕಾಯ್ದೆಯ ಕುರಿತು ವಿಶೇಷ ಚರ್ಚೆ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.