ADVERTISEMENT

ಮುಂದುವರಿದ ಧರಣಿ: ಪರಿಷತ್ ಕಲಾಪ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2022, 5:37 IST
Last Updated 18 ಫೆಬ್ರುವರಿ 2022, 5:37 IST
   

ಬೆಂಗಳೂರು: ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಸದಸ್ಯರ ಧರಣಿ ಸತತ ಮೂರನೇ ದಿನವೂ ಮುಂದುವರಿದಿದೆ. ಶುಕ್ರವಾರ ಬೆಳಿಗ್ಗೆ ಕಲಾಪ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ಸದಸ್ಯರು ಸರ್ಕಾರದ ವಿರುದ್ಧ ಘೋಷಣೆ ಕೂಗಲಾರಂಭಿಸಿದ್ದರಿಂದ ಸಭಾಪತಿ ಬಸವರಾಜ ಹೊರಟ್ಟಿ ಕಲಾಪವನ್ನು ಹತ್ತು ನಿಮಿಷ ಕಾಲ ಮುಂದೂಡಿದರು.

ಮಾಜಿ ಶಾಸಕ ಮಳ್ಳೂರ್ ಆನಂದ ರಾವ್ ನಿಧನಕ್ಕೆ ಸಂತಾಪ‌ ಸೂಚಿಸಲಾಯಿತು. ಬಳಿಕ ಪ್ರಶ್ನೋತ್ತರ ಕಲಾಪ ಆರಂಭವಾಯಿತು. ಆದರೆ, ಕಾಂಗ್ರೆಸ್ ಸದಸ್ಯರು ಜೋರಾಗಿ ಗದ್ದಲ ನಡೆಸಿದರು.

'ತಾವೂ ಸೇರಿದಂತೆ ವಿಪಕ್ಷ ಸದಸ್ಯರ ಜೀವಕ್ಕೆ ಬೆದರಿಕೆ ಇದೆ. ರಕ್ಷಣೆ ಕೊಡಬೇಕು' ಎಂದು ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಒತ್ತಾಯಿಸಿದರು.

ADVERTISEMENT

ಆಡಳಿತ ಮತ್ತು ವಿರೋಧ ಪಕ್ಷದ ಸದಸ್ಯರ ನಡುವೆ ವಾಕ್ಸಮರ ಜೋರಾಗಲಾರಂಭಿಸಿತು. ಹತ್ತು ನಿಮಷ ಕಲಾಪ ಮುಂದೂಡಿದ ಸಭಾಪತಿ, ತಮ್ಮ ಕೊಠಡಿಯಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ಪ್ರಮುಖ ನಾಯಕರ ಜತೆ ಚರ್ಚೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.