ADVERTISEMENT

ರಾಜ್ಯದಲ್ಲಿ ಮಹಿಳೆ, ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2021, 4:27 IST
Last Updated 22 ಡಿಸೆಂಬರ್ 2021, 4:27 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಳಗಾವಿ: 2018ರಿಂದ ಈಚೆಗೆ ರಾಜ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲೇ ಸಾಗಿದೆ. ಮಹಿಳೆಯರು ಮತ್ತು ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣಗಳ ಸಂಖ್ಯೆಯಲ್ಲೂ ಏರಿಕೆಯಾಗಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್‌ ಅವರು ಮಂಗಳವಾರ ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್‌ನ ಯು.ಬಿ. ವೆಂಕಟೇಶ್‌ ಪ್ರಶ್ನೆಗೆ ನೀಡಿರುವ ಲಿಖಿತ ಉತ್ತರದಲ್ಲಿ ಈ ಮಾಹಿತಿ ಒದಗಿಸಿದ್ದಾರೆ.

2018ರಿಂದ ಈವರೆಗೆ ಮಹಿಳೆಯರ ಮೇಲಿನ ದೌರ್ಜನ್ಯ ಆರೋಪದಡಿ 7,301 ಸೈಬರ್‌ ಅಪರಾಧ ಪ್ರಕರಣಗಳು ದಾಖಲಾಗಿವೆ. ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಲ್ಲಿ 915 ಪ್ರಕರಣಗಳು ದಾಖಲಾಗಿವೆ ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.