ADVERTISEMENT

ಕಾಡುಗೊಲ್ಲ ಸಮುದಾಯವನ್ನು ಎಸ್‌ಟಿಗೆ ಸೇರಿಸಲು ಬದ್ಧ: ಮಾಧುಸ್ವಾಮಿ

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2021, 19:59 IST
Last Updated 21 ಡಿಸೆಂಬರ್ 2021, 19:59 IST
ಮಾಧುಸ್ವಾಮಿ
ಮಾಧುಸ್ವಾಮಿ   

ಬೆಳಗಾವಿ: ರಾಜ್ಯದಲ್ಲಿ ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡ (ಎಸ್‌ಟಿ) ಪಟ್ಟಿಗೆ ಸೇರಿಸಲು ಸರ್ಕಾರ ಬದ್ಧವಾಗಿದೆ. ಈ ಬಗ್ಗೆ ಪರಿಷ್ಕೃತ ವರದಿ ಸಿದ್ಧವಾಗಿದ್ದು ಕೇಂದ್ರಕ್ಕೆ ಸಲ್ಲಿಸಲಾಗುವುದು ಎಂದು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

ವಿಧಾನಸಭೆಯಲ್ಲಿ ಮಂಗಳವಾರ ನಿಯಮ 69ರಡಿ ಜೆಡಿಎಸ್‌ನ ಕೆ.ಎಂ.ಶಿವಲಿಂಗೇಗೌಡ, ಬಿಜೆಪಿಯ ಕೆ.ಪೂರ್ಣಿಮಾ ಅವರ ಪ್ರಸ್ತಾಪಕ್ಕೆ ಸಚಿವರು ಉತ್ತರ ನೀಡಿದರು.

ಕೇಂದ್ರ ಸರ್ಕಾರ ಕೆಲವು ಸ್ಪಷ್ಟನೆಗಳನ್ನು ಕೋರಿದ್ದು, ಪರಿಷ್ಕೃತ ವರದಿಯಲ್ಲಿ ಅವುಗಳಿಗೆ ಉತ್ತರ ನೀಡಲಾಗಿದೆ. ಅದರ ಅಧ್ಯಯನ ಮಾಡಿ ಕೇಂದ್ರಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ADVERTISEMENT

ಕಾಡುಗೊಲ್ಲ ಅಭಿವೃದ್ಧಿ ನಿಗಮಕ್ಕೆ ಪೂರ್ಣಾವಧಿ ಅಧ್ಯಕ್ಷರನ್ನು ನೇಮಿಸಿ ಸಮುದಾಯದ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದೂ ಅವರು ಭರವಸೆ ನೀಡಿದರು.

ಕಾಡುಗೊಲ್ಲ ಸಮುದಾಯವನ್ನು ಎಸ್‌ಟಿಗೆ ಸೇರಿಸುವ ಸಂಬಂಧ ಕುಲಶಾಸ್ತ್ರೀಯ ಅಧ್ಯಯನ ನಡೆದಿತ್ತು. ಅದರಲ್ಲಿ ಈ ಸಮುದಾಯದ ಧಾರ್ಮಿಕ ವಿಧಿ ವಿಧಾನ ಮತ್ತು ವಿವಾಹ ಪದ್ಧತಿಗಳು ಹಿಂದೂಗಳ ಪ್ರಕಾರವೇ ಇರುವುದರಿಂದ ಬುಡಕಟ್ಟು ಪದ್ಧತಿಗೆ ಅನ್ವಯವಾಗುವಂತೆ ವರದಿಯನ್ನು ಸರಿಪಡಿಸುವಂತೆ ಸೂಚಿಸಿತ್ತು ಎಂದು ಹೇಳಿದರು.

ಆದಷ್ಟು ಶೀಘ್ರ ಕಾಡುಗೊಲ್ಲ ಸಮುದಾಯವನ್ನು ಎಸ್‌ಟಿ ಪಟ್ಟಿಗೆ ಸೇರಿಸಲು ಕ್ರಮಜರುಗಿಸ
ಬೇಕು ಎಂದುವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಶಿವಲಿಂಗೇಗೌಡ, ಪೂರ್ಣಿಮಾ ಅವರು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.