ADVERTISEMENT

ಕಾಂಗ್ರೆಸ್ ಸದಸ್ಯರ ಧರಣಿ: ಪರಿಷತ್ ಕಲಾಪ ಸೋಮವಾರಕ್ಕೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2022, 7:01 IST
Last Updated 18 ಫೆಬ್ರುವರಿ 2022, 7:01 IST
   

ಬೆಂಗಳೂರು: ಕಾಂಗ್ರೆಸ್ ಸದಸ್ಯರ ಧರಣಿ, ಪ್ರತಿಪಕ್ಷ ಮತ್ತು ಆಡಳಿತ ಪಕ್ಷಗಳ ಸದಸ್ಯರ ವಾಕ್ಸಮರದಿಂದ ಪರಿಸ್ಥಿತಿ ನಿಯಂತ್ರಣಕ್ಕೆ ಬಾರದ ಕಾರಣದಿಂದ ಸಭಾಪತಿ ಬಸವರಾಜ ಹೊರಟ್ಟಿ ವಿಧಾನ ಪರಿಷತ್ ಕಲಾಪವನ್ನು ಸೋಮವಾರಕ್ಕೆ ಮುಂದೂಡಿದರು.

ಅಲ್ಪ ವಿರಾಮದ ಬಳಿಕ ಮತ್ತೆ ಕಲಾಪ ಆರಂಭವಾಯಿತು. ಕಾಂಗ್ರೆಸ್ ಸದಸ್ಯರು ಧರಣಿ ಮುಂದುವರಿಸಿದರು. ಗದ್ದಲದ ನಡುವೆಯೇ ಪ್ರಶ್ನೋತ್ತರಗಳನ್ನು ಸದನದಲ್ಲಿ ಮಂಡಿಸಲಾಯಿತು.

ಕಾಂಗ್ರೆಸ್ ಸದಸ್ಯರು ಸಚಿವ ಕೆ.ಎಸ್. ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಏರು ಧ್ವನಿಯಲ್ಲಿ ಘೋಷಣೆ ಕೂಗಲಾರಂಭಿಸಿದರು. ಬಿಜೆಪಿ ಸದಸ್ಯರೂ ಪ್ರತ್ಯುತ್ತರ ನೀಡಲು ಯತ್ನಿಸಿದರು. ಗದ್ದಲ ಜೋರಾಗುತ್ತಿದ್ದಂತೆ‌ ಸಭಾಪತಿ ಹೊರಟ್ಟಿ ಕಲಾಪವನ್ನು ಸೋಮವಾರ ಬೆಳಿಗ್ಗೆ 11 ಗಂಟೆಗೆ ಮುಂದೂಡಿದರು.

ADVERTISEMENT

ಮುಂದುವರಿದ ಧರಣಿ: ಕಲಾಪ ಮುಂದೂಡಿದರೂ ಕಾಂಗ್ರೆಸ್ ಸದಸ್ಯರು ಧರಣಿ ಮುಂದುವರಿಸಿದ್ದಾರೆ. ಸೋಮವಾರದವರೆಗೂ ಧರಣಿ‌ ಮುಂದುವರಿಸುವುದಾಗಿ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಪ್ರಕಟಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.