ADVERTISEMENT

ಶ್ರೀಗಂಧ ನೀತಿ ಶೀಘ್ರ ಪ್ರಕಟ: ಉಮೇಶ ಕತ್ತಿ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2022, 19:54 IST
Last Updated 21 ಮಾರ್ಚ್ 2022, 19:54 IST

ಬೆಂಗಳೂರು: ‘ಶ್ರೀಗಂಧ ಬೆಳೆಯುವುದು ಮತ್ತು ಮಾರಾಟ ಮಾಡುವುದಕ್ಕೆ ಸಂಬಂಧಿಸಿ ಶೀಘ್ರ ಹೊಸ ನೀತಿಯನ್ನು ಪ್ರಕಟಿಸಲಾಗುವುದು’ ಎಂದು ಅರಣ್ಯ ಸಚಿವ ಉಮೇಶ ವಿ. ಕತ್ತಿ ತಿಳಿಸಿದರು.

ವಿಧಾನ ಪರಿಷತ್‌ನಲ್ಲಿ ಸೋಮವಾರ ಕಾಂಗ್ರೆಸ್‌ನ ಎಸ್‌. ರವಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ರಾಜ್ಯದಲ್ಲಿ ಶ್ರೀಗಂಧ ಬೆಳೆಯಲು ಅರಣ್ಯ ಇಲಾಖೆಯ ಅನುಮತಿ ಅಗತ್ಯ ಇಲ್ಲ. ಶ್ರೀಗಂಧದ ಮರಗಳನ್ನು ಮೈಸೂರು, ಶಿವಮೊಗ್ಗ ಮತ್ತು ಧಾರವಾಡ ಸರ್ಕಾರಿ ಶ್ರೀಗಂಧದ ಕೋಠಿಗಳಿಗೆ ಹಾಗೂ ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಸಂಸ್ಥೆಗಳಿಗೆ ಮಾರಬಹುದು. ಮುಂದಿನ ದಿನಗಳಲ್ಲಿ ರೈತರು ಎಲ್ಲಿ ಬೇಕಾದರೂ ಶ್ರೀಗಂಧ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗುವುದು’ ಎಂದು ವಿವರಿಸಿದರು.

‘ರಾಜ್ಯದಲ್ಲಿ 4,699 ಹೆಕ್ಟೇರ್‌ ಪ್ರದೇಶದಲ್ಲಿ ಶ್ರೀಗಂಧ ಬೆಳೆಯಲಾಗುತ್ತಿದೆ. ಕರ್ನಾಟಕ ಅರಣ್ಯ ನಿಯಮಾವಳಿ ಅನ್ವಯ ಕಟಾವಿಗೆ ಬಂದ ಶ್ರೀಗಂಧವನ್ನು ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಅವಕಾಶ ಇಲ್ಲ’ ಎಂದರು.

ADVERTISEMENT

ಸಚಿವರ ಉತ್ತರಕ್ಕೆ ಪ್ರತಿಕ್ರಿಯಿಸಿದ ಎಸ್‌. ರವಿ, ‘ಶ್ರೀಗಂಧಕ್ಕೆ ಲಕ್ಷಾಂತರ ರೂಪಾಯಿ ಮೌಲ್ಯವಿದ್ದರೂ ಅರಣ್ಯ ಇಲಾಖೆಯು ಕಡಿಮೆ ಬೆಲೆ ನೀಡಿ ರೈತರಿಗೆ ಮೋಸ ಮಾಡುತ್ತಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.