ADVERTISEMENT

ವಿಧಾನಮಂಡಲದ ಚಳಿಗಾಲದ ಅಧಿವೇಶನ: 100 ದಾಟದ ಶಾಸಕರ ಸಂಖ್ಯೆ

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2021, 20:41 IST
Last Updated 13 ಡಿಸೆಂಬರ್ 2021, 20:41 IST
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರದಿಂದ ಆರಂಭವಾದ ಚಳಿಗಾಲದ ಅಧಿವೇಶನ ಸಂದರ್ಭದಲ್ಲಿ ಸುವರ್ಣ ವಿಧಾನಸೌಧದ ಸುತ್ತ ಪೊಲೀಸ್ ಬಿಗಿ ಬಂದೂಬಸ್ತ್ ಮಾಡಲಾಗಿದೆ -ಪ್ರಜಾವಾಣಿ ಚಿತ್ರ/ ರಂಜು ಪಿ
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರದಿಂದ ಆರಂಭವಾದ ಚಳಿಗಾಲದ ಅಧಿವೇಶನ ಸಂದರ್ಭದಲ್ಲಿ ಸುವರ್ಣ ವಿಧಾನಸೌಧದ ಸುತ್ತ ಪೊಲೀಸ್ ಬಿಗಿ ಬಂದೂಬಸ್ತ್ ಮಾಡಲಾಗಿದೆ -ಪ್ರಜಾವಾಣಿ ಚಿತ್ರ/ ರಂಜು ಪಿ   

ಬೆಳಗಾವಿ (ಸುವರ್ಣ ವಿಧಾನಸೌಧ): ವಿಧಾನಮಂಡಲದ ಚಳಿಗಾಲದ ಅಧಿವೇಶನದ ಮೊದಲ ದಿನವೇ ವಿಧಾನಸಭೆಯಲ್ಲಿ ಬಹುತೇಕಶಾಸಕರ ಗೈರು ಹಾಜರಿ ಎದ್ದು ಕಾಣುತ್ತಿತ್ತು.

ಸೋಮವಾರ ಮಧ್ಯಾಹ್ನದವರೆಗೆ ಸುಮಾರು 75 ರಿಂದ 80 ಶಾಸಕರು ಮಾತ್ರ ಭಾಗವಹಿಸಿದ್ದರು. ಮಧ್ಯಾಹ್ನದ ಬಳಿಕವೂ ಸರಿ ಸುಮಾರು ಅಷ್ಟೇ ಶಾಸಕರು ಇದ್ದರು. ಬೆಳಿಗ್ಗೆ ಹಾಜರಾದವರಲ್ಲಿ ಕೆಲವರು ಮಧ್ಯಾಹ್ನದ ಬಳಿಕ ಹಾಜರಾಗಲಿಲ್ಲ.

ಬೆಳಿಗ್ಗೆ 11 ಕ್ಕೆ ಕರೆಗಂಟೆ ಹಾಕಿದರೂ ಸುಮಾರು ಹೊತ್ತು ಕೋರಂ ಇಲ್ಲದೇ ಕಲಾಪ ಆರಂಭವಾಗಲಿಲ್ಲ.

ADVERTISEMENT

ಶಾಸಕರಾದ ಬಿ.ಎಸ್‌.ಯಡಿಯೂರಪ್ಪ, ಕಾಂಗ್ರೆಸ್‌ನ ಕೆ.ಆರ್.ರಮೇಶ್‌ಕುಮಾರ್‌, ಜೆಡಿಎಸ್‌ನ ಬಂಡೆಪ್ಪ ಕಾಶೆಂಪೂರ, ಕೆ.ಎಂ.ಶಿವಲಿಂಗೇಗೌಡ ಅವರು ಎಂದಿನ ಉತ್ಸಾಹದಲ್ಲೇ ಬೆಳಗ್ಗಿನಿಂದ ಸಂಜೆಯವರೆಗೆ ಕಲಾಪದಲ್ಲಿ ಭಾಗವಹಿಸಿದ್ದರು. ಜೆಡಿಎಸ್‌ನ ಶಾಸಕರಾದ ಎಚ್‌.ಡಿ.ಕುಮಾರಸ್ವಾಮಿ, ಎಚ್‌.ಡಿ.ರೇವಣ್ಣ ಅವರು ಬಂದಿರಲಿಲ್ಲ. ಕಳೆದ ಅಧಿವೇಶನ ಪೂರ್ತಿ ಗೈರಾಗಿದ್ದ ಉಪಸಭಾಧ್ಯಕ್ಷ ಆನಂದ ಮಾಮನಿ ಕಲಾಪದಲ್ಲಿ ಹಾಜರಾಗಿದ್ದರು.

ಸುವರ್ಣ ವಿಧಾನಸೌಧದ ಹೊರಗೆ ಜನರ ಉತ್ಸಾಹ ಕಂಡು ಬಂದಿತು. ಪ್ರೇಕ್ಷಕರ ಗ್ಯಾಲರಿಯಲ್ಲಿ ಕುಳಿತು ಕಲಾಪವನ್ನು ವೀಕ್ಷಿಸಲು ಪಾಸ್‌ಗಾಗಿ ಉದ್ದ ಸಾಲೇ ಇತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.