ADVERTISEMENT

Live: ಸಚಿವ ಸಂಪುಟ ವಿಸ್ತರಣೆ: ರಾಜಭವನದಲ್ಲಿ 7 ಮಂದಿ ನೂತನ ಸಚಿವರ ಪ್ರಮಾಣ ವಚನ

ಇಂದು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ 7 ಶಾಸಕರು. ಉಮೇಶ್ ಕತ್ತಿ, ಎಸ್. ಅಂಗಾರ, ಸಿ.ಪಿ. ಯೋಗೀಶ್ವರ್, ಅರವಿಂದ ಲಿಂಬಾವಳಿ, ಎಂಟಿಬಿ ನಾಗರಾಜ್, ಆರ್. ಶಂಕರ್, ಮುರುಗೇಶ್ ನಿರಾಣಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

​ಪ್ರಜಾವಾಣಿ ವಾರ್ತೆ
Published 13 ಜನವರಿ 2021, 16:49 IST
Last Updated 13 ಜನವರಿ 2021, 16:49 IST

ಪಕ್ಷನಿಷ್ಠರಿಗೆ ಅನ್ಯಾಯವಾಗಿದೆ: ಶಾಸಕ ಅರವಿಂದ ಬೆಲ್ಲದ್

ಸಂಪುಟ ವಿಸ್ತರಣೆಯಲ್ಲಿ ಪಕ್ಷನಿಷ್ಠ ಶಾಸಕರು ಮತ್ತು ಯುವಕರಿಗೆ ಅನ್ಯಾಯವಾಗಿದೆ ಎಂದು ಶಾಸಕ ಅರವಿಂದ ಬೆಲ್ಲದ್ ಆರೋಪಿಸಿದರು.

ಸಚಿವ ಸ್ಥಾನ ಸಿಗದಿರುವುದಕ್ಕೆ ಶಾಸಕ ಅಭಯ ಪಾಟೀಲ ಬೇಸರ

"ವಿಚಾರಕ್ಕೆ ಬದ್ಧತೆ ಮತ್ತು ಪಕ್ಷಕ್ಕೆ ನಿಷ್ಟೆ ಇದು ದೌರ್ಬಲ್ಯ ಅಲ್ಲ" - ಅಭಯ ಪಾಟೀಲ, ಶಾಸಕರು, ಬೆಳಗಾವಿ ದಕ್ಷಿಣ

ಸಂಪುಟ ವಿಸ್ತರಣೆ...

ಪ್ರಮಾಣ ವಚನ ಸ್ವೀಕಾರ ಮುಕ್ತಾಯ

ಏಳು ಮಂದಿ ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಿದ ರಾಜ್ಯಪಾಲ ವಜುಭಾಯಿ ವಾಲಾ. ದೇವರು ಮತ್ತು ರೈತರ ಹೆಸರಿನಲ್ಲಿ ಪ್ರಮಾಣ ವಚನ.

ADVERTISEMENT

ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಉಮೇಶ್‌ ಕತ್ತಿ

ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಉಮೇಶ್‌ ಕತ್ತಿ, ಅರವಿಂದ ಲಿಂಬಾವಳಿ ಹಾಗೂ ಮುರುಗೇಶ್ ನಿರಾಣಿ.

ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿರುವ 7 ಶಾಸಕರು–

1. ಉಮೇಶ್ ಕತ್ತಿ
2. ಎಸ್. ಅಂಗಾರ
3. ಸಿ.ಪಿ. ಯೋಗೀಶ್ವರ್
4. ಅರವಿಂದ ಲಿಂಬಾವಳಿ
5. ಎಂಟಿಬಿ ನಾಗರಾಜ್
6. ಆರ್. ಶಂಕರ್
7. ಮುರುಗೇಶ್ ನಿರಾಣಿ

ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಬರೋದು ಕಾಂಗ್ರೆಸ್: ಸಿದ್ದರಾಮಯ್ಯ

ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಬರೋದು ಕಾಂಗ್ರೆಸ್ ಎಂದು ಸಿದ್ದರಾಮಯ್ಯ ಇಲ್ಲಿ ಪ್ರತಿಪಾದಿಸಿದರು. ಗ್ರಾಮ ಜನಾಧಿಕಾರ ಸನ್ಮಾನ‌ ಸಮಾವೇಶದಲ್ಲಿ ಮಾತನಾಡಿದ ಅವರು, ತಿಪ್ಪರಲಾಗ ಹಾಕಿದರೂ ಯಡಿಯೂರಪ್ಪ ಪಕ್ಷ ಮತ್ತೆ ಅಧಿಕಾರಕ್ಕೆ ಬರಲ್ಲ ಎಂದರು.

ಮಾರ್ಚ್‌ ಅಥವಾ ಏಪ್ರಿಲ್‌ನಲ್ಲಿ ಸಂಪುಟ ‍ಪುನಾರಚನೆ: ರಮೇಶ ಜಾರಕಿಹೊಳಿ

ಬೆಳಗಾವಿ: ‘ಮಾರ್ಚ್ ಅಥವಾ ಏಪ್ರಿಲ್‌ನಲ್ಲಿ ಸಂಪುಟ ಪುನಾರಚನೆ ಪ್ರಕ್ರಿಯೆಯು ದೊಡ್ಡ ಮಟ್ಟದಲ್ಲಿ ಆಗುತ್ತದೆ. ಈಗ ಸಚಿವ ಸ್ಥಾನ ಕೈತಪ್ಪಿದವರಿಗೆ ಆಗ ಅವಕಾಶ ಸಿಗಲಿದೆ’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಿಳಿಸಿದರು.

ಕಾಲ ಕೂಡಿ ಬಂದಾಗ ಸಚಿವನಾಗುವೆ: ಕುಮಠಳ್ಳಿ

ಬೆಳಗಾವಿ: ‘ಕಾಲ ಕೂಡಿ ಬಂದಾಗ ನನಗೂ ಸಚಿವ ಸ್ಥಾನ ಸಿಗುತ್ತದೆ’ ಎಂದು ಅಥಣಿ ಶಾಸಕ ಮಹೇಶ ಕುಮಠಳ್ಳಿ ಹೇಳಿದರು.

‘ನನ್ನ ಕ್ಷೇತ್ರದ ಅಭಿವೃದ್ಧಿಗೆ ಗಮನಹರಿಸಿದ್ದೇನೆ. ಸಚಿವ ಸ್ಥಾನ ಸಿಗದಿರಬಹುದು. ಆದರೆ, ನನ್ನ ಕ್ಷೇತ್ರಕ್ಕೆ ಬೇಕಾದ ಕೆಲಸ ಮಾಡಿಕೊಡುತ್ತಿದ್ದಾರೆ. ಮುಂದೆ ಸಚಿವರನ್ನಾಗಿಯೂ ಮಾಡಬಹುದು ಎನ್ನುವ ವಿಶ್ವಾಸವಿದೆ. ಗೆದ್ದ 12 ಶಾಸಕರ ಪೈಕಿ 11 ಶಾಸಕರಿಗೆ ಸಚಿವ ಸ್ಥಾನ ನೀಡಿದ್ದಾರೆ. ಹೀಗಾಗಿ, ನಮ್ಮನ್ನು ಕಡೆಗಣಿಸುತ್ತಿದ್ದಾರೆ ಎಂದು ಹೇಳುವುದಕ್ಕೆ ಬರುವುದಿಲ್ಲ. ನನ್ನ ಕ್ಷೇತ್ರದವರೇ ಉಪ ಮುಖ್ಯಮಂತ್ರಿ ಆಗಿರುವುದಕ್ಕೆ ಸಂತೋಷವಿದೆ. ಕ್ಷೇತ್ರದ ಜನರಿಗೂ ಪರಿಸ್ಥಿತಿ ಗೊತ್ತಿದೆ’ ಎಂದರು.

ಜ. 28ರಿಂದ ವಿಧಾನಮಂಡಲ ಅಧಿವೇಶನ

ರಾಜೀನಾಮೆಗೆ ಸಚಿವ ನಾಗೇಶ್ ಸಮ್ಮತಿ

ಸಚಿವ ಸ್ಥಾನದ ಹುದ್ದೆಗೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ ಎಂದು ಅಬಕಾರಿ ಸಚಿವ ಎಚ್‌.ನಾಗೇಶ್‌ ಹೇಳಿದರು. ರಾಜೀನಾಮೆ ನೀಡಿದರೆ, ಅದಕ್ಕೆ ಸಮಾನಾಂತರ ಹುದ್ದೆಯನ್ನು ನೀಡುವುದಾಗಿ ಸಿಎಂ ಭರವಸೆ ನೀಡಿದರು. ಬಳಿಕ ಅದಕ್ಕೆ ನಾಗೇಶ್‌ ಒಪ್ಪಿಗೆ ನೀಡಿದರು ಎಂದು ಮೂಲಗಳಿಂದ ತಿಳಿದು ಬಂದಿದೆ.

ಯೋಗೇಶ್ವರ್‌ಗೆ ಮಂತ್ರಿ ಸ್ಥಾನ ಏಕೆ?: ವಿಶ್ವನಾಥ್ ಕಿಡಿ

ಅಬಕಾರಿ ಸಚಿವ ಎಚ್. ನಾಗೇಶ್ ರಾಜೀನಾಮೆಗೆ ಸೂಚನೆ

ಕೆಲವರಿಗೆ ಅಸಮಾಧಾನ ಇದೆ: ಜಗದೀಶ್ ಶೆಟ್ಟರ್

ಮಂತ್ರಿ ಸ್ಥಾನದಿಂದ ಕೈಬಿಡುವ ವಿಚಾರ ಗೊತ್ತಿಲ್ಲ: ಸಚಿವ ಪ್ರಭು ಚವ್ಹಾಣ್

ನೂತನ ಸಚಿವರ ಪಟ್ಟಿ ಪ್ರಕಟಿಸಿದ ಬೆನ್ನಲ್ಲೇ ಬಿಜೆಪಿ ಶಾಸಕ ಸತೀಶ್‌ ರೆಡ್ಡಿ ಅಸಮಾಧಾನ

ನೂತನ ಸಚಿವರ ಪಟ್ಟಿ ಪ್ರಕಟಿಸಿದ ಬೆನ್ನಲ್ಲೇ ಬಿಜೆಪಿ ಶಾಸಕ ಸತೀಶ್‌ ರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, 'ಯಡಿಯೂರಪ್ಪನವರೇ ಮಂತ್ರಿಮಂಡಲ ವಿಸ್ತರಣೆಯಲ್ಲಿ ಸಚಿವರ ಆಯ್ಕೆ ಪ್ರಕ್ರಿಯೆಯ ಮಾನದಂಡಗಳೇನು? ನಿಮಗೆ, ನಮ್ಮ ರಾಜ್ಯ ಮತ್ತು ರಾಷ್ಟ್ರದ ನಾಯಕರುಗಳಿಗೆ ನಿಷ್ಟಾವಂತ ಯುವ ಕಾರ್ಯಕರ್ತರು ಕಾಣುತ್ತಿಲ್ಲವೆ? ನಮ್ಮ ಕಷ್ಟ ನಷ್ಟಗಳನ್ನು ಆಲಿಸುತ್ತಿದ್ದ ಶ್ರೀ ಅನಂತಕುಮಾರ್ ಜಿ ರವರ ಇಲ್ಲದಿರುವಿಕೆ ಎದ್ದು ಕಾಣುತ್ತಿದೆ' ಎಂದು ಹೇಳಿದ್ದಾರೆ
 

ಮಧ್ಯ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದ ರೇಣುಕಾಚಾರ್ಯ

ಯಾವುದೇ ಖಾತೆ ಕೊಟ್ಟರೂ ಸಮರ್ಥವಾಗಿ ನಿಭಾಯಿಸುತ್ತೇನೆ: ಮುರುಗೇಶ್‌ ನಿರಾಣಿ

ಮುನಿರತ್ನಗಿಲ್ಲ ಸಚಿವ ಸ್ಥಾನ, 7 ನೂತನ ಸಚಿವರ ಪಟ್ಟಿ ಪ್ರಕಟಿಸಿದ ಯಡಿಯೂರಪ್ಪ

ಸಚಿವ ಸಂಪುಟ ಸಭೆ ಆರಂಭ

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ‌ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಸಂಪುಟ ಸಭೆ ಆರಂಭವಾಗಿದೆ.

ಉಪ‌ ಮುಖ್ಯಮಂತ್ರಿಗಳಾದ ಗೋವಿಂದ‌ ಎಂ.‌ಕಾರಜೋಳ, ಲಕ್ಷ್ಮಣ ಸವದಿ, ಸಚಿವರಾದ ಆರ್. ಅಶೋಕ ಅವರೊಂದಿಗೆ ಮುಖ್ಯಮಂತ್ರಿ ಸಂಪುಟ ಸಭೆಗೆ ಬಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.