ಬೆಂಗಳೂರು: ಬಿಜೆಪಿ ಸೇರಲಿಲ್ಲವೆಂದು ನನ್ನನ್ನು ಜೈಲಿಗೆ ಹಾಕಿಸಿದ್ದರು ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಕ್ಕೆ ಬಿಜೆಪಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ.
ಡಿ.ಕೆ.ಶಿವಕುಮಾರ್ ಅವರು ದಾಖಲೆಗಳಿಲ್ಲದೆ ಆರೋಪ ಮಾಡುತ್ತಾರೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.
‘ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೇ, ‘ಹಿರಿಯಕ್ಕನ ಚಾಳಿ ಮನೆ ಮಂದಿಗೆ’ ಎಂಬ ಮಾತೊಂದಿದೆ. ತಾವ್ಯಾಕೋ ಅದೇ ಹಾದಿಯಲ್ಲಿ ಹೆಜ್ಜೆ ಇಡುವಂತಿದೆ. ದಾಖಲೆ ಇಲ್ಲದೆ ಮಾತನಾಡುವುದು, ನಂತರ ಮೌನಕ್ಕೆ ಶರಣಾಗುವುದರಲ್ಲಿ ಸಿದ್ದರಾಮಯ್ಯ ನಿಸ್ಸೀಮರು. ಈಗ ನೀವು ಅದೇ ಹಾದಿ ತುಳಿಯುತ್ತಿದ್ದೀರಿ’ ಎಂದು ಟ್ವೀಟ್‌ನಲ್ಲಿ ಬಿಜೆಪಿ ಉಲ್ಲೇಖಿಸಿದೆ.
ಬಿಜೆಪಿಯವರಿಗೆ ಬೆಂಬಲ ಕೊಡಲಿಲ್ಲ ಹಾಗೂ ಅವರೊಂದಿಗೆ ಹೋಗಲಿಲ್ಲ ಎಂಬ ಕಾರಣಕ್ಕೆ ಕಾರಾಗೃಹಕ್ಕೆ ಹಾಕಿಸಿದ್ದರು. ಇದು ಎಲ್ಲರಿಗೂ ಗೊತ್ತಿದೆಯಲ್ಲಾ, ದಾಖಲೆಗಳು ಇದೆಯಲ್ಲಾ ಎಂದು ಬೆಳಗಾವಿಯಲ್ಲಿ ಶಿವಕುಮಾರ್ ಸೋಮವಾರ ಹೇಳಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.