‘ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ರಾಜ್ಯ ಉಸ್ತುವಾರಿ ರಾಧಾಮೋಹನ್ ಅಗರ್‌ವಾಲ್ ಅವರು, ಸಂಡೂರು ಉಪಚುನಾವಣೆಯಲ್ಲಿ ಬಿಜೆಪಿ ಸೋತಿರುವುದಕ್ಕೆ ನಾನೇ ಕಾರಣ ಎಂದು ಹೇಳಿದ್ದು ಮನಸಿಗೆ ನೋವುಂಟು ಮಾಡಿದೆ’ ಎಂದು ಬಿಜೆಪಿ ನಾಯಕ ಬಿ. ಶ್ರೀರಾಮುಲು ಗುರುವಾರ ಬಳ್ಳಾರಿಯಲ್ಲಿ ಹೇಳಿದರು. ಇದೇ ವೇಳೆ, ಬಿಜೆಪಿ ರಾಜ್ಯಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದರು. ಅಲ್ಲದೆ, ಆಪ್ತರಾಗಿದ್ದ ಬಿ. ಜನಾರ್ದನ ರೆಡ್ಡಿ ವಿರುದ್ಧವೂ ವಾಗ್ದಾಳಿ ನಡೆಸಿದ ಶ್ರೀರಾಮುಲು, ‘ಸಮಯ ಬಂದರೆ, ಜನಾರ್ದನ ರೆಡ್ಡಿಯವರ ದಾಖಲೆ ಬಯಲು ಮಾಡುತ್ತೇನೆ’ ಎಂದು ಎಚ್ಚರಿಸಿದರು. ‘ಮುಂದಿನ ಚುನಾವಣೆಯಲ್ಲಿ ಕೂಡ್ಲಿಗಿಯಿಂದ ಸ್ಪರ್ಧಿಸುತ್ತೇನೆ’ ಎಂದೂ ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.