ADVERTISEMENT

ದಾವಣಗೆರೆ: ವಿಜಯೇಂದ್ರ ಪರ ಬಣದ ಸಭೆ ಆರಂಭ; 40ಕ್ಕೂ ಹೆಚ್ಚು ಮುಖಂಡರು ಭಾಗಿ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2024, 7:17 IST
Last Updated 15 ಡಿಸೆಂಬರ್ 2024, 7:17 IST
<div class="paragraphs"><p>ವಿಜಯೇಂದ್ರ ಪರ ಬಣದ ಸಭೆ</p></div>

ವಿಜಯೇಂದ್ರ ಪರ ಬಣದ ಸಭೆ

   

ದಾವಣಗೆರೆ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಪರ ಗುರುತಿಸಿಕೊಂಡಿರುವ ಬಣದ ಪ್ರಮುಖ ನಾಯಕರ ಸಭೆ ಇಲ್ಲಿನ ಸಾಯಿ ಇಂಟರ್‌ನ್ಯಾಷನಲ್‌ ಹೋಟೆಲ್‌ನಲ್ಲಿ ಭಾನುವಾರ ಮಧ್ಯಾಹ್ನ 12ಕ್ಕೆ ಆರಂಭವಾಗಿದೆ.

ಮಾಜಿ ಸಚಿವರಾದ ಎಂ.ಪಿ.ರೇಣುಕಾಚಾರ್ಯ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಹರತಾಳು ಹಾಲಪ್ಪ, ಸೋಮಶೇಖರ ರೆಡ್ಡಿ, ಎಸ್.ಎ.ರವೀಂದ್ರನಾಥ್, ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಸೇರಿ 40ಕ್ಕೂ ಹೆಚ್ಚು ಮುಖಂಡರು ಪಾಲ್ಗೊಂಡಿದ್ದಾರೆ. ದಾವಣಗೆರೆಯಲ್ಲಿ ಸಮಾವೇಶ ಆಯೋಜಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.

ADVERTISEMENT

ಸಭೆಗೆ ಶನಿವಾರ ರಾತ್ರಿಯೇ ಹಲವು ನಾಯಕರು ದಾವಣಗೆರೆಗೆ ಆಗಮಿಸಿದ್ದರು. ಇನ್ನೂ ಕೆಲ ನಾಯಕರು ಭಾನುವಾರ ಬೆಳಿಗ್ಗೆ ಧಾವಿಸಿದರು. ಜಗಳೂರು ಮಾಜಿ ಶಾಸಕ ಎಸ್.ವಿ.ರಾಮಚಂದ್ರಪ್ಪ ಅವರ ಮನೆಯಲ್ಲಿ ತಿಂಡಿ ಸೇವಿಸಿದರು. ದಾವಣಗೆರೆ ತಾಲ್ಲೂಕಿನ ಬಾತಿಯ ರೇವಣಸಿದ್ದೇಶ್ವರ ಸ್ವಾಮಿ ಹಾಗೂ ದುರ್ಗಾದೇವಿ ದರ್ಶನ ಪಡೆದು ಸಭೆಯಲ್ಲಿ ಪಾಲ್ಗೊಂಡರು.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಬಣಗಳ ನಡುವಿನ ಮುನಿಸು ಹೈಕಮಾಂಡ್ ಮಧ್ಯ ಪ್ರವೇಶದಿಂದ ಶಮನವಾಗಿದೆ ಎನ್ನುವಾಗಲೇ ದಾವಣಗೆರೆಯಲ್ಲಿ ಸೇರಿರುವ ಈ ಸಭೆ ಕುತೂಹಲ ಕೆರಳಿಸಿದೆ. ವಿಜಯೇಂದ್ರ ಪರವಾಗಿ ಮಧ್ಯ ಕರ್ನಾಟಕದಲ್ಲಿ ಶಕ್ತಿ ಪ್ರದರ್ಶನಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಯಲಿದೆ ಎಂದು ಮೂಲಗಳು ಮಾಹಿತಿ ನೀಡಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.