ADVERTISEMENT

ಗುತ್ತಿಗೆದಾರರ ವಿರುದ್ಧ ಎಫ್‌ಐಆರ್: ಸರ್ಕಾರದ ವಿರುದ್ಧ ಬಿಜೆಪಿ ಕಿಡಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 18 ಆಗಸ್ಟ್ 2023, 7:38 IST
Last Updated 18 ಆಗಸ್ಟ್ 2023, 7:38 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಬಾಕಿ ಬಿಲ್‌ಗಾಗಿ ಒತ್ತಾಯಿಸಿದ ಗುತ್ತಿಗೆದಾರರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ ಎನ್ನುವ ಪತ್ರಿಕಾ ವರದಿಗಳನ್ನು ಉಲ್ಲೇಖಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಿಡಿ ಕಾರಿದೆ.

ಸರ್ಕಾರದ ಈ ಭಂಡತನಕ್ಕೆ ಕೊನೆ ಯಾವಾಗ ಎಂದು ಪ್ರಶ್ನೆ ಮಾಡಿದೆ.

ಅಕ್ರಮಗಳನ್ನು ಪ್ರಶ್ನಿಸಿದರೆ ಜೈಲು ಗ್ಯಾರಂಟಿ, ಅಕ್ರಮಗಳಲ್ಲಿ ಭಾಗಿಯಾದರೆ ಪ್ರಮೋಷನ್ ಗ್ಯಾರಂಟಿ ಎಂದು ಕುಹಕವಾಡಿದೆ.

ADVERTISEMENT

ಈ ಬಗ್ಗೆ ‘ಎಕ್ಸ್’ನಲ್ಲಿ ಬರೆದುಕೊಂಡಿರುವ ಬಿಜೆಪಿ, ‘ಭ್ರಷ್ಟಾಚಾರದ ಆರೋಪದಡಿ ಸೂಕ್ತ ಸಾಕ್ಷಿಗಳು ದೊರೆತರೂ, ಅಂತಹ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವ ಎಟಿಎಂ ಸರ್ಕಾರ, ತನ್ನ ತಪ್ಪುಗಳ ಬಗ್ಗೆ ಪ್ರಶ್ನಿಸುವವರನ್ನು ಶಿಕ್ಷಿಸಲು ಸದಾ "ಸಿದ್ದ"ವಾಗಿರುತ್ತದೆ’ ಎಂದು ಹೇಳಿದೆ.

‘ಸರ್ಕಾರದ ಜನವಿರೋಧಿ ನೀತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸುವವರ ಮೇಲೆ ಎಫ್ಐಆರ್ ಮಾಡಿದ್ದಾಯ್ತು. ಈಗ ಸರ್ಕಾರದ ಲಂಚಗುಳಿತನವನ್ನು ಬಹಿರಂಗಪಡಿಸಿದರು ಎಂಬ ಕಾರಣಕ್ಕೆ ಗುತ್ತಿಗೆದಾರರ ವಿರುದ್ಧ ಸಹ ಎಫ್ಐಆರ್ ದಾಖಲಿಸಿ ತನ್ನ ದ್ವೇಷದ ರಾಜಕಾರಣವನ್ನು ಪ್ರದರ್ಶಿಸುತ್ತಿದೆ. ಸರ್ಕಾರದ ಈ ಭಂಡತನಕ್ಕೆ ಕೊನೆ ಎಂದು?’ ಎಂದು ಪ್ರಶ್ನೆ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.