ಬೆಂಗಳೂರು: ‘ರಾಜ್ಯದಲ್ಲಿನ ನಿಗಮ-ಮಂಡಳಿಗಳಿಗೆ ನೇಮಕಾತಿ ಕುರಿತಂತೆ ನನ್ನನ್ನು ಕೇಳಬೇಡಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೇಳಿ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ರಾಜ್ಯದಲ್ಲಿ ಖಾಲಿ ಇರುವ ನಿಗಮ-ಮಂಡಳಿಗಳ ನೇಮಕದ ಬಗ್ಗೆ ಸುದ್ದಿಗಾರರು ಭಾನುವಾರ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ‘ರಾಜ್ಯದ ವಿಚಾರ ನನ್ನನ್ನು ಕೇಳಬೇಡಿ’ ಎಂದಷ್ಟೇ ಹೇಳಿದರು.
ಸಂಸತ್ತಿನಲ್ಲಿ ಚರ್ಚೆ: ಲೋಕಸಭಾ ಚುನಾವಣಾ ಅಕ್ರಮಗಳ ಕುರಿತ ರಾಹುಲ್ ಗಾಂಧಿ ಪ್ರಸ್ತಾಪಿಸಿದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಖರ್ಗೆ, ‘ದೇಶದಾದ್ಯಂತ ನಡೆಯುತ್ತಿರುವ ಚುನಾವಣಾ ಅಕ್ರಮಗಳ ಬಗ್ಗೆ ಸಂಸತ್ತಿನಲ್ಲಿ ಚರ್ಚೆ ನಡೆಸಲಾಗುವುದು’ ಎಂದರು.
‘ಚುನಾವಣಾ ಅಕ್ರಮಗಳ ಬಗ್ಗೆ ಈಗಾಗಲೇ ಚರ್ಚೆಗಳಾಗುತ್ತಿವೆ. ಅದರ ಕುರಿತು ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಚರ್ಚೆ ನಡೆಸುತ್ತೇವೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.