ADVERTISEMENT

ಕುಮಾರಸ್ವಾಮಿ ಬಜೆಟ್‌ಗೆ ಪೇಜಾವರ ಸ್ವಾಮೀಜಿ ಶ್ಲಾಘನೆ

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2019, 5:01 IST
Last Updated 29 ಡಿಸೆಂಬರ್ 2019, 5:01 IST
   

ಧರ್ಮಸ್ಥಳ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಜ್ಯದ ಸಮಗ್ರ ಅಭಿವೃದ್ಧಿಗೆ ಪೂರಕವಾದ, ಎಲ್ಲ ಜನರಿಗೂ ಸಂತೋಷ ನೀಡುವಂತಹ ಬಜೆಟ್ ಮಂಡಿಸಿದ್ದಾರೆ ಎಂದು ಉಡುಪಿ ಪೇಜಾವರ ಮಠದ ವಿಶ್ವೇಶ್ವರ ಸ್ವಾಮೀಜಿ ಶನಿವಾರ ಶ್ಲಾಘಿಸಿದರು.

ಧರ್ಮಸ್ಥಳ ಭಗವಾನ್ ಬಾಹುಬಲಿ ಮಹಾಮಸ್ತಕಾಭಿಷೇಕದ ಪ್ರಯುಕ್ತ ಪ್ರಾರಂಭಿಸುತ್ತಿರುವ ಕೆರೆ ಸಂಜೀವಿನಿ ಯೋಜನೆಯ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಸ್ವಾಮೀಜಿ ಮೆಚ್ಚುಗೆ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಬರುವುದು ವಿಳಂಬವಾದ ಕಾರಣ ಸ್ವಾಮೀಜಿ ಸಮಾರಂಭ ಉದ್ಘಾಟಿಸಿ, ಮಾತನಾಡಿ ತೆರಳಿದ್ದರು. ಕುಮಾರಸ್ವಾಮಿ ವೇದಿಕೆಗೆ ಬಂದ ಬಳಿಕ ಸ್ವಾಮೀಜಿ ಪುನಃ ಬಂದು ಮಾತನಾಡಿದರು.

ADVERTISEMENT

'ಕುಮಾರಸ್ವಾಮಿ ಅವರು ಮಂಡಿಸಿರುವ ಬಜೆಟ್ ಅತ್ಯುತ್ತಮವಾಗಿದೆ. ಎಲ್ಲ ಜನರು ಮತ್ತು ಕ್ಷೇತ್ರಗಳಿಗೆ ಅನುದಾನ ಹಂಚಿಕೆ ಮಾಡಿದ್ದಾರೆ. ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೂ ಆದ್ಯತೆ ನೀಡಿದ್ದಾರೆ. ರಾಜ್ಯದ ಸಮಗ್ರ ಅಭಿವೃದ್ಧಿಗೆ ಈ ಬಜೆಟ್ ಪೂರಕವಾಗಿದೆ' ಎಂದು ಸ್ವಾಮೀಜಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.