ADVERTISEMENT

ಎಲೆಕ್ಷನ್ ಸರ್ವೈವಲ್ ಬಜೆಟ್: ರಾಜ್ಯ ಬಜೆಟ್‌ ಕುರಿತು ಪ್ರಿಯಾಂಕ್‌ ಖರ್ಗೆ ಟೀಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಮಾರ್ಚ್ 2022, 11:18 IST
Last Updated 4 ಮಾರ್ಚ್ 2022, 11:18 IST
ಪ್ರಿಯಾಂಕ್‌ ಖರ್ಗೆ
ಪ್ರಿಯಾಂಕ್‌ ಖರ್ಗೆ   

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿರುವುದು ‘ಎಲೆಕ್ಷನ್ ಸರ್ವೈವಲ್ ಬಜೆಟ್’ ಎಂದು ಕಾಂಗ್ರೆಸ್‌ ಶಾಸಕ ಪ್ರಿಯಾಂಕ್‌ ಖರ್ಗೆ ವ್ಯಂಗ್ಯವಾಡಿದ್ದಾರೆ.

ಈ ಕುರಿತು ಶುಕ್ರವಾರ ಸರಣಿ ಟ್ವೀಟ್‌ ಮಾಡಿರುವ ಅವರು, ‘ಇದು ಎಕಾನಮಿ ರಿಕವರಿ ಬಜೆಟ್ ಅಲ್ಲ. ಎಲೆಕ್ಷನ್ ಸರ್ವೈವಲ್ ಬಜೆಟ್ ಅಷ್ಟೇ ಆಗಿದೆ. ಇಂದು ಸಿಎಂ ಹೇಳಿರುವುದೆಲ್ಲಾ ಕೇವಲ ಘೋಷಣೆಗೇ ಸೀಮಿತವಾಗಿರಲಿದೆ’ ಎಂದು ವಾಗ್ದಾಳಿ ನಡೆಸಿದ್ದಾರೆ.

‘ರಾಜ್ಯದ ಆರ್ಥಿಕ ಪುನಶ್ಚೇತನಕ್ಕೆ ಸಹಕಾರಿಯಾಗುವಂತಹ ಹಾಗೂ ರೈತರಿಗೆ, ಯುವಕರಿಗೆ, ಮಹಿಳೆಯರಿಗೆ ಅನುಕೂಲವಾಗುವಂತಹ ಯಾವುದೇ ಅಂಶ ಈ ಬಜೆಟ್‌ನಲ್ಲಿ ಇಲ್ಲ’ ಎಂದೂ ಖರ್ಗೆ ಹರಿಹಾಯ್ದಿದ್ದಾರೆ.

ADVERTISEMENT

‘ನವ ಕರ್ನಾಟಕ ನಿರ್ಮಿಸುತ್ತೇವೆ ಎಂದು ಬಿಜೆಪಿಯವರು ಹೇಳಿದ್ದರು. ಇವರ ಯೋಗ್ಯತೆಗೆ ಕರ್ನಾಟಕದಲ್ಲಿ ಇರುವುದನ್ನು ಉಳಿಸಿಕೊಂಡು ಹೋದರೆ ಸಾಕಾಗಿದೆ. ರಾಜ್ಯವನ್ನು ಸಾಲದಲ್ಲಿ ಮುಳುಗಿಸಿದ್ದಾರೆ. ಇದು ಡಬಲ್ ಇಂಜಿನ್ ಬಜೆಟ್ ಅಲ್ಲ. ಡಬಲ್ ಧೋಕಾ ಬಜೆಟ್’ ಎಂದು ಟೀಕಿಸಿದ್ದಾರೆ.

ಇವನ್ನೂ ಓದಿ...

Karnataka Budget: ಬೊಮ್ಮಾಯಿ ಬಜೆಟ್‌ನಲ್ಲಿ ಏನೇನಿದೆ? ಇಲ್ಲಿವೆ ಮುಖ್ಯಾಂಶಗಳು
ರಾಜ್ಯ ಬಜೆಟ್: ನವ ಭಾರತಕ್ಕಾಗಿ ನವಕರ್ನಾಟಕ: ರಾಜ್ಯ ಅಭಿವೃದ್ಧಿಗೆ ಪಂಚಸೂತ್ರಗಳು
ಕರ್ನಾಟಕ ಬಜೆಟ್–2022 | ನೀರಾವರಿಗೆ ಆದ್ಯತೆ; ಎತ್ತಿನಹೊಳೆ ಯೋಜನೆಗೆ 3 ಸಾವಿರ ಕೋಟಿ
Karnataka Budget: ಮೇಕೆದಾಟು ಯೋಜನೆಗೆ ₹1,000 ಕೋಟಿ ಮೀಸಲು–ಬೊಮ್ಮಾಯಿ
Karnataka Budget 2022: ಬೆಂಗಳೂರಿಗೆ ಏನೇನು?
ಬೊಮ್ಮಾಯಿ ಬಜೆಟ್‌: ಕೃಷಿ ಕ್ಷೇತ್ರಕ್ಕೇನು ಕೊಡುಗೆ? ಇಲ್ಲಿದೆ ವಿವರ
ಕರ್ನಾಟಕ ಬಜೆಟ್–2022: ಯಾವ ವಲಯಕ್ಕೆ ಎಷ್ಟು ಅನುದಾನ?
Karnataka Budget: ಯಕ್ಷಗಾನ ಸಮ್ಮೇಳನ, ಕಾಸರಗೋಡು, ಗೋವಾದಲ್ಲಿ ಕನ್ನಡ ಭವನ ಘೋಷಣೆ
Karnataka Budget: ಆರೋಗ್ಯ ಕ್ಷೇತ್ರಕ್ಕೆ ಸಿಕ್ಕಿದ್ದೇನು?
ಬಜೆಟ್ ಪ್ರತಿ ಹಿಡಿದು ಮಿಂಚಿದ ಸಿಎಂ ಬೊಮ್ಮಾಯಿ
ಕರ್ನಾಟಕ ಬಜೆಟ್–2022: ತೆರಿಗೆ ದರದಲ್ಲಿ ಯಥಾಸ್ಥಿತಿ –ಸಿಎಂ ಬೊಮ್ಮಾಯಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.