ADVERTISEMENT

Karnataka Budget: ಕಾರ್ಮಿಕರ ಕ್ಷೇಮಾಭಿವೃದ್ಧಿಗೆ ಬೊಮ್ಮಾಯಿ ಘೋಷಿಸಿದ್ದೇನು?‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಮಾರ್ಚ್ 2022, 10:59 IST
Last Updated 4 ಮಾರ್ಚ್ 2022, 10:59 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಕಟ್ಟಡ ಕಾರ್ಮಿಕರ ರಿಯಾಯಿತಿ ಬಸ್ ಪಾಸ್ ಯೋಜನೆಯನ್ನು ರಾಜ್ಯದಾದ್ಯಂತ ವಿಸ್ತರಣೆ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಶುಕ್ರವಾರ ರಾಜ್ಯ ಬಜೆಟ್‌ ಮಂಡಿಸಿದ ಅವರು, ‘2.30 ಲಕ್ಷ ಕಟ್ಟಡ ಕಾರ್ಮಿಕರ ಶ್ರೇಯೋಭಿವೃದ್ಧಿಗೆ ₹2610 ಕೋಟಿ ಯೋಜನೆಗಳ ಅನುಷ್ಠಾನ ಮಾಡಲಾಗುವುದು’ ಎಂದು ಘೋಷಿಸಿದರು.

'ಕಟ್ಟಡ ಕಾರ್ಮಿಕರಿಗಾಗಿ 100 ಹೈಟೆಕ್ ಸಂಚಾರಿ ಕ್ಲಿನಿಕ್ ಪ್ರಾರಂಭಿಲಾಗುವುದು’ ಎಂದು ಸಿಎಂ ತಿಳಿಸಿದರು.

ADVERTISEMENT

‘ಕೇಂದ್ರ ಸರ್ಕಾರದ ನೆರವಿನೊಂದಿಗೆ ಹುಬ್ಬಳ್ಳಿ ಮತ್ತು ದಾವಣಗೆರೆ ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಗಳ ಹಾಸಿಗೆಗಳ ಸಾಮರ್ಥ್ಯ 100ಕ್ಕೆ ಹೆಚ್ಚಿಸಲಾಗುವುದು. 19 ಹೊಸ ಚಿಕಿತ್ಸಾಲಯಗಳನ್ನು ಪ್ರಾರಂಭಿಸಲಾಗುವುದು’ ಎಂದು ಹೇಳಿದರು.

'ನಿರಂತರವಾಗಿ ಕೆಲಸವನ್ನರಸಿ ಸಂಚರಿಸುವ ಕಟ್ಟಡ ಕಾರ್ಮಿಕರಿಗೆ ಉತ್ತಮ ಕೆಲಸದ ವಾತಾವರಣವನ್ನು ಸೃಷ್ಟಿಸಲು ಸುಸಜ್ಜಿತವಾದ ತಾತ್ಕಾಲಿಕ ವಸತಿ ಗೃಹಗಳನ್ನು ನಿರ್ಮಿಸಲಾಗುವುದು’ ಎಂದು ಬೊಮ್ಮಾಯಿ ತಿಳಿಸಿದರು.

ಇವನ್ನೂ ಓದಿ...

Karnataka Budget: ಬೊಮ್ಮಾಯಿ ಬಜೆಟ್‌ನಲ್ಲಿ ಏನೇನಿದೆ? ಇಲ್ಲಿವೆ ಮುಖ್ಯಾಂಶಗಳು
ರಾಜ್ಯ ಬಜೆಟ್: ನವ ಭಾರತಕ್ಕಾಗಿ ನವಕರ್ನಾಟಕ: ರಾಜ್ಯ ಅಭಿವೃದ್ಧಿಗೆ ಪಂಚಸೂತ್ರಗಳು
ಕರ್ನಾಟಕ ಬಜೆಟ್–2022 | ನೀರಾವರಿಗೆ ಆದ್ಯತೆ; ಎತ್ತಿನಹೊಳೆ ಯೋಜನೆಗೆ 3 ಸಾವಿರ ಕೋಟಿ
Karnataka Budget: ಮೇಕೆದಾಟು ಯೋಜನೆಗೆ ₹1,000 ಕೋಟಿ ಮೀಸಲು–ಬೊಮ್ಮಾಯಿ
Karnataka Budget 2022: ಬೆಂಗಳೂರಿಗೆ ಏನೇನು?
ಬೊಮ್ಮಾಯಿ ಬಜೆಟ್‌: ಕೃಷಿ ಕ್ಷೇತ್ರಕ್ಕೇನು ಕೊಡುಗೆ? ಇಲ್ಲಿದೆ ವಿವರ
ಕರ್ನಾಟಕ ಬಜೆಟ್–2022: ಯಾವ ವಲಯಕ್ಕೆ ಎಷ್ಟು ಅನುದಾನ?
Karnataka Budget: ಯಕ್ಷಗಾನ ಸಮ್ಮೇಳನ, ಕಾಸರಗೋಡು, ಗೋವಾದಲ್ಲಿ ಕನ್ನಡ ಭವನ ಘೋಷಣೆ
Karnataka Budget: ಆರೋಗ್ಯ ಕ್ಷೇತ್ರಕ್ಕೆ ಸಿಕ್ಕಿದ್ದೇನು?
ಬಜೆಟ್ ಪ್ರತಿ ಹಿಡಿದು ಮಿಂಚಿದ ಸಿಎಂ ಬೊಮ್ಮಾಯಿ
ಕರ್ನಾಟಕ ಬಜೆಟ್–2022: ತೆರಿಗೆ ದರದಲ್ಲಿ ಯಥಾಸ್ಥಿತಿ –ಸಿಎಂ ಬೊಮ್ಮಾಯಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.