2024–25ರ ಬಜೆಟ್ ವೇಳೆ ಸಿದ್ದರಾಮಯ್ಯ
–ಪ್ರಜಾವಾಣಿ ಚಿತ್ರ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದಾಖಲೆಯ 16ನೇ ಬಾರಿಗೆ ಬಜೆಟ್ ಮಂಡನೆ ಮಾಡಲಿದ್ದಾರೆ. ಆ ಮೂಲಕ ತಮ್ಮದೇ ದಾಖಲೆಯನ್ನು ಮುರಿಯಲಿದ್ದಾರೆ.
ಬೆಳಿಗ್ಗೆ 10.30ಕ್ಕೆ ರಾಹುಕಾಲ ಆರಂಭವಾಗಲಿದ್ದು, ಅದಕ್ಕೆ ಮೊದಲೇ ಅಂದರೆ 10.15ಕ್ಕೆ ಬಜೆಟ್ ಮಂಡನೆಯನ್ನು ಸಿದ್ದರಾಮಯ್ಯ ಶುರುಮಾಡಲಿದ್ದಾರೆ.
ಕಳೆದ ಬಾರಿ ಅವರು ₹3.71 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡಿಸಿದ್ದರು. ಈ ಬಾರಿ ಬಜೆಟ್ ಗಾತ್ರ ₹4 ಲಕ್ಷ ಕೋಟಿ ದಾಟಬಹುದೆಂದು ಅಂದಾಜಿಸಲಾಗಿದೆ.
ಘೋಷಿಸಿದಂತೆ ಐದು ‘ಗ್ಯಾರಂಟಿ’ಗಳನ್ನು ಅನುಷ್ಠಾನ ಗೊಳಿಸಿರುವ ಸರ್ಕಾರ, ಇವುಗಳಿಗೆ ಪ್ರಸಕ್ತ ಸಾಲಿನಲ್ಲೂ ಬಹುಪಾಲು ತೆಗೆದಿಡಲೇಬೇಕಾದ ಅನಿವಾರ್ಯಕ್ಕೆ ಸಿಲುಕಿದೆ. ಅದರ ಜತೆಗೆ ಯಾವ ಹೊಸ ಯೋಜನೆಗಳನ್ನು ಘೋಷಿಸಲಿದೆ, ಅಭಿವೃದ್ಧಿ ಪೂರಕ ಕಾರ್ಯಕ್ರಮಗಳನ್ನು ರೂಪಿಸಲಿದೆ ಎಂಬ ಕುತೂಹಲವೂ ಮನೆ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.